Davanagere: ಆಧಾರ್ ಕಾರ್ಡ್ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ರೂ. 1000 ಶುಲ್ಕ ವಿರೋಧಿಸಿ ಪ್ರತಿಭಟನೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು
ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು 31ನೇ ಮಾರ್ಚ್ ಕೊನೆಯ ದಿನಾಂಕವಾಗಿದ್ದು ಅದರೊಳಗೆ ಮಾಡಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಹೇಳಲಾಗಿದೆ.
ದಾವಣಗೆರೆ: ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡನ್ನು ಲಿಂಕ್ ಮಾಡುವುದು ಮೊದಲೆಲ್ಲ ಶುಲ್ಕರಹಿತವಾಗಿತ್ತು. ಆದರೆ ಈ ಪ್ರಕ್ರಿಯೆಗೆ ಶುಲ್ಕ ವಿಧಿಸಲಾಗುತ್ತಿದೆ. ಆದಾಯ ತೆರಿಗೆ ಇಲಾಖೆ (Income Tax department) ಕ್ರಮವನ್ನು ವಿರೋಧಿಸಿ ಇಂದು ದಾವಣಗೆರೆ ನಗರದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು (Congress workers) ದಾವಣಗೆರೆ ವನ್ ಸೆಂಟರ್ ಎದುರು ಪ್ರತಿಭಟನೆ (protest) ನಡೆಸಿದರು. ಕೈಯಲ್ಲಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ಗಳ ಪ್ರತಿಗಳನ್ನು ಹಿಡಿದಿದ್ದ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಂದಹಾಗೆ, ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು 31ನೇ ಮಾರ್ಚ್ ಕೊನೆಯ ದಿನಾಂಕವಾಗಿದ್ದು ಅದರೊಳಗೆ ಮಾಡಿಸದಿದ್ದರೆ ಭಾರಿ ದಂಡ ತೆರಬೇಕಾಗುತ್ತದೆ ಎಂದು ಹೇಳಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಂಗಳೂರಿನ ಎಂಆರ್ಪಿಎಲ್ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
