ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ; ಸಮರ್ಥ್ ಶಾಮನೂರು ನಾಮಪತ್ರಕ್ಕೆ ಜಮೀರ್ ಗೈರು, ಸಾದಿಕ್ ಪೈಲ್ವಾನ್ ಅಖಾಡಕ್ಕೆ

Edited By:

Updated on: Mar 23, 2026 | 3:24 PM

: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಈ ಪ್ರಮುಖ ಕಾರ್ಯಕ್ರಮದಿಂದ ಸಚಿವ ಜಮೀರ್ ಅಹಮದ್ ಖಾನ್ ದೂರ ಉಳಿದಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಬಂಡಾಯದ ಅಭ್ಯರ್ಥಿಯಾಗಿ ಮುಸ್ಲಿಂ ಸಮುದಾಯದ ಸಾದಿಕ್ ಪೈಲ್ವಾನ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದೆ.

ದಾವಣಗೆರೆ (ಮಾರ್ಚ್ 23): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಈ ಪ್ರಮುಖ ಕಾರ್ಯಕ್ರಮದಿಂದ ಸಚಿವ ಜಮೀರ್ ಅಹಮದ್ ಖಾನ್ ದೂರ ಉಳಿದಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಬಂಡಾಯದ ಅಭ್ಯರ್ಥಿಯಾಗಿ ಮುಸ್ಲಿಂ ಸಮುದಾಯದ ಸಾದಿಕ್ ಪೈಲ್ವಾನ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದೆ.

ಮುಸ್ಲಿಮ್ ಸಮುದಾಯದ ಟಿಕೆಟ್​​​ಗೆ ಬೇಡಿಕೆ ಇಟ್ಟಿತ್ತು. ಆದ್ರೆ, ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸವಾಲು ಹಾಕಿದ್ದಾರೆ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More