ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್‌ನ ಯುವಕರು, ಶಫೀಕ್ ಪಂಡಿತ್ ಶಿಷ್ಯರು ಶ್ರೀನಿವಾಸ್ಗೆ ಬೆಂಬಲ ಘೋಷಿಸಿದರು. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಬಲ ತುಂಬಿದೆ.
ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
Published on: Mar 23, 2026 09:28 AM
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

