ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

Edited By:

Updated on: Mar 23, 2026 | 9:35 AM

ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್‌ನ ಯುವಕರು, ಶಫೀಕ್ ಪಂಡಿತ್ ಶಿಷ್ಯರು ಶ್ರೀನಿವಾಸ್​ಗೆ ಬೆಂಬಲ ಘೋಷಿಸಿದರು. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಬಲ ತುಂಬಿದೆ.

ದಾವಣಗೆರೆ, ಮಾರ್ಚ್ 23: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರುಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಕಾಂಗ್ರೆಸ್​​​ನಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಹೆಚ್ಚಿನ ಬೆಂಬಲ ದೊರೆಯುವುದಕ್ಕೂ ಕಾರಣವಾಗುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಸಿಗದೇ ಇರುವುದರಿಂದ ಅಸಮಾಧಾನಗೊಂಡಿರುವ 12ನೇ ವಾರ್ಡ್‌ನ ಯುವಕರು, ‘ಕೈ’ ಮುಖಂಡ ಶಫೀಕ್ ಪಂಡಿತ್ ಅವರ ಶಿಷ್ಯರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. 20ಕ್ಕೂ ಹೆಚ್ಚು ಮುಸ್ಲಿಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 23, 2026 09:28 AM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More