ಮನೆ ಮುಂದೆ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ: ದಾವಣಗೆರೆಯಲ್ಲಿ ಎರಡು ತಿಂಗಳಲ್ಲಿ ಐದು ಕಾರುಗಳು ಕಳವು

Edited By:

Updated on: Oct 30, 2026 | 2:55 PM

ದಾವಣಗೆರೆಯ ಭೂಮಿಕಾ ನಗರದಲ್ಲಿ ಆಯುರ್ವೇದ ವೈದ್ಯ ಡಾ. ಜಗದೀಶ್ ಎಂಬವರಿಗೆ ಸೇರಿದ ಇನೋವಾ ಕಾರನ್ನು ಕಳ್ಳರು ಕದ್ದೊಯ್ದಿದ್ದಾರೆ. ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನೇ ಮುಂಜಾವ ಕಳವು ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಇದೇ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಐದು ಕಾರುಗಳು ಕಳ್ಳತನವಾಗಿರುವುದು ಸಾರ್ವಜನಿಕರನ್ನು ಆತಂಕ್ಕೀಡುಮಾಡಿದೆ.

ದಾವಣಗೆರೆ, ಅಕ್ಟೋಬರ್ 30: ಮನೆಯ ಕಾಂಪೌಂಡ್‌ ಬಳಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳರು ಕದ್ದೊಯ್ದಿರುವ ಘಟನೆ ದಾವಣಗೆರೆ ನಗರದ ಭೂಮಿಕಾ ನಗರದಲ್ಲಿ ನಡೆದಿದೆ. ನವೆಂಬರ್ 12ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಕಳ್ಳರು ಬೆಳಗಿನ ಜಾವ ಕದ್ದುಕೊಂಡು ಪರಾರಿಯಾಗಿದ್ದಾರೆ. ಭೂಮಿಕಾ ನಗರದ ಎಸ್‌ಎಸ್ ಆಸ್ಪತ್ರೆ ರಸ್ತೆಯಲ್ಲಿರುವ ಆಯುರ್ವೇದ ವೈದ್ಯ ಡಾ. ಜಗದೀಶ್ ಮನೆ ಮುಂದೆ ಈ ಘಟನೆ ನಡೆದಿದೆ.

ಇನ್ನು, ದಾವಣಗೆರೆಯ ಇದೇ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರು ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಎರಡು ತಿಂಗಳಲ್ಲಿ ಭೂಮಿಕಾ ನಗರ, ಸರಸ್ವತಿ ನಗರ, ಜಯನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಟ್ಟು ಐದು ಕಾರುಗಳು ಕಳ್ಳತನವಾಗಿವೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More