ಅವಧಿಗೂ ಮುನ್ನ ದಾವಣಗೆರೆಯಲ್ಲಿ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್!

Edited By:

Updated on: Oct 12, 2026 | 9:55 PM

ಮುಖ್ಯಾಂಶಗಳು

  • ದಾವಣಗೆರೆ ಜಿಲ್ಲೆಯಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣ
  • ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರಿಂದ ಮಾಹಿತಿ
  • ಎಸ್‌ಐಆರ್‌ ಮುಕ್ತಾಯಗೊಳಿಸಿದ ಮೊದಲ ಜಿಲ್ಲೆ ದಾವಣಗೆರೆ ಆಗಬಹುದು

ರಾಜ್ಯಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಗೊಂದಲಗಳಿಂದ ಕೂಡಿರುವಾಗ, ದಾವಣಗೆರೆ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ಗಡುವಿಗಿಂತ 10 ದಿನ ಮೊದಲೇ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಯಾವುದೇ ಆಕ್ಷೇಪಣೆ, ದೂರುಗಳಿಲ್ಲದೆ 2.01 ಲಕ್ಷ ಮತದಾರರನ್ನು ಕೈಬಿಡಲಾಗಿದೆ. ವಿಡಿಯೋ ನೋಡಿ.

ದಾವಣಗೆರೆ, ಅಕ್ಟೋಬರ್​ 12: ದೇಶಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಗೊಂದಲ ಮತ್ತು ಆರೋಪಗಳಿಗೆ ಕಾರಣವಾಗಿರುವಾಗ, ದಾವಣಗೆರೆ ಜಿಲ್ಲೆಯಲ್ಲಿ ಚುನಾವಣಾ ಆಯೋಗ ನಿಗದಿಪಡಿಸಿದ್ದ ಗಡುವಿಗಿಂತ 10 ದಿನ ಮೊದಲೇ ಎಸ್​​​​ಐಆರ್​​ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಸಿ ರಾಜ್ಯದಲ್ಲೇ ಮೊದಲ ಜಿಲ್ಲೆಯಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಯಾವುದೇ ಆಕ್ಷೇಪಣೆ, ದೂರು, ಎಫ್‌ಐಆರ್‌ ಅಥವಾ ರಾಜಕೀಯ ಗೊಂದಲಗಳಿಲ್ಲದೆ ಈ ಪ್ರಕ್ರಿಯೆ ಮುಕ್ತಾಯಗೊಂಡಿರುವುದು ಮತ್ತೊಂದು ವಿಶೇಷ. ದಾವಣಗೆರೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 12,98,000 ಮತದಾರರಿದ್ದಾರೆ. ಈ ಪರಿಷ್ಕರಣೆಯಲ್ಲಿ 2,01,000 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸಾವನ್ನಪ್ಪಿದವರು ಹಾಗೂ ಎರಡೆರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವವರನ್ನು ಗುರುತಿಸಿ ಕೈಬಿಡಲಾಗಿದೆ. ಈ ಪೈಕಿ ಆರು ಜನ ನೇಪಾಳ ಮೂಲದವರು ಕೂಡ ಪತ್ತೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಪೂರ್ಣ ಪಾರದರ್ಶಕವಾಗಿ ಕಾರ್ಯ ನಿರ್ವಹಿಸಿ ದಾವಣಗೆರೆ ಜಿಲ್ಲೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಮಾದರಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 12, 2026 09:53 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More