ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು!

Edited By:

Updated on: Mar 27, 2026 | 10:55 AM

ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.

ದಾವಣಗೆರೆ, ಮಾರ್ಚ್​ 27: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More