ಪತಿ, ಸಹೋದರ ಮಾವ ಆತ್ಮಹತ್ಯೆ: ಮದ್ವೆಯಾಗಿ 45 ದಿನಕ್ಕೆ ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ದಾವಣಗೆರೆಯಲ್ಲಿ ಪತ್ನಿ ಸರಸ್ವತಿ ಪ್ರಿಯಕರನೊಂದಿಗೆ ಪರಾರಿಯಾದ ಕಾರಣಕ್ಕೆ ಪತಿ ಹರೀಶ್ ಹಾಗೂ ಸಹೋದರ ಮಾವ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡ ದುರಂತ ನಡೆದಿದೆ. ಈ ಸಂಬಂಧ ಪ್ರೇಮಿ ಶಿವಕುಮಾರ್ ಮತ್ತು ಸರಸ್ವತಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ಅನ್ಯಾಯವಾಗಿರುವ ಕಾರಣ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ.
ದಾವಣಗೆರೆ, ಜನವರಿ 28: ಪತ್ನಿ ಬೇರೊಬ್ಬನ ಜೊತೆ ಪರಾರಿ ಹಿನ್ನೆಲೆ ಪತಿ ಮತ್ತು ಸಹೋದರ ಮಾವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರೇಮಿ ಶಿವಕುಮಾರ ಹಾಗೂ ಸರಸ್ವತಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿ ಪತ್ನಿ ಸರಸ್ವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರಗಾಗಿ ಶೋಧ ನಡೆದಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಉಮಾ ಪ್ರಶಾಂತ್, ಪ್ರೀತಿಸಿದ ಯುವಕನೊಂದಿಗೆ ಓಡಿ ಹೋಗಿದ್ದ ಸರಸ್ವತಿ ಮದುವೆಗೂ ಮೊದಲೇ ಆರೋಪಿ ಶಿವಕುಮಾರನನ್ನ ಪ್ರೀತಿಸುತ್ತಿದ್ದಳು. ಜನವರಿ 23ರಂದು ಗುಮ್ಮನೂರ ಗ್ರಾಮದಿಂದ ತನ್ನ ಪ್ರಿಯತಮನ ಜೊತೆಗೆ ಹೋಗಿದ್ದಳು. ಇದೇ ಕಾರಣಕ್ಕೆ ಬೇಸತ್ತು ಆಕೆಯ ಪತಿ ಮತ್ತು ಸಹೋದರ ಮಾವ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾದ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ಅಟ್ರಾಸಿಟಿ ಕೇಸ್ ಕೂಡ ಆರೋಪಿ ಶಿವಕುಮಾರ ವಿರುದ್ಧ ದಾಖಲಾಗಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
