AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 31, 2026 | 3:36 PM

Share

ಸಚಿವ ಎಸ್​ಎಸ್​ ಮಲ್ಲಿಕಾರ್ಜು ಆಡಿದ ಮಾತು ಹಾಗೂ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದರಿಂದ ಜಮಿರ್ ಅಹಮ್ಮದ್ ಖಾನ್ ಮುನಿಸಿಕೊಂಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕರೆಯುಸುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದು, ಇದು ಭಾರೀ ಸಂಚಲಕ್ಕೆ ಕಾರಣವಾಗಿದೆ.

ದಾವಣಗೆರೆ, (ಮಾರ್ಚ್ 31): ಸಚಿವ ಎಸ್​ಎಸ್​ ಮಲ್ಲಿಕಾರ್ಜು ಆಡಿದ ಮಾತು ಹಾಗೂ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದರಿಂದ ಜಮಿರ್ ಅಹಮ್ಮದ್ ಖಾನ್ ಮುನಿಸಿಕೊಂಡಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಪ್ರಚಾರದಿಂದ ದೂರ ಉಳಿದುಕೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿವೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕರೆಯುಸುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದು, ಇದು ಭಾರೀ ಸಂಚಲ ಮೂಡಿಸಿದೆ.

ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಶೇ. 79ರಷ್ಟು ಜನ ಕಾಂಗ್ರೆಸ್ ಅಭ್ಯರ್ಥಿ ಪರ ಒಲವು ಹೊಂದಿದ್ದಾರೆ. ಶಾಮನೂರು ಶಿಕ್ಷಣ ಸಂಸ್ಥೆಯಲ್ಲಿ ಲಕ್ಷಾಂತರ ಜನ ಶಿಕ್ಷಣ ಪಡೆದಿದ್ದಾರೆ. ಸಚಿವ ಜಮೀರ್ ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡ್ತಿದ್ದಾರೆ.ಮುಗಿಸಿಕೊಂಡು ಬಂದ ಮೇಲೆ ಎಲ್ಲಿಗೆ ಕಳುಹಿಸುವ ಬಗ್ಗೆ ಚರ್ಚಿಸುತ್ತೇವೆ. ಒಬ್ಬರಿಂದ ಪಕ್ಷ ನಡೆಯಲ್ಲ. ಅದು ಡಿಕೆ, ಸಿಎಂ, ಜಮೀರ್ ಆಗಬಹುದು. 16 ನಿಗಮ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಅಬ್ದುಲ್ ಜಬ್ಬಾರ್​ಗೆ 3 ಬಾರಿ ಪರಿಷತ್ ಸದಸ್ಯ ಸ್ಥಾನ ನೀಡಿದ್ದೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಜಮೀರ್ ಅಹಮ್ಮದ್ ಖಾನ್​​ಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More