ದಾವಣಗೆರೆಯಲ್ಲಿ ಕಾಂಗ್ರೆಸ್​​ಗೆ ಮತ್ತಷ್ಟು ಬಿಸಿ ತುಪ್ಪವಾದ ಬಂಡಾಯ: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು

Edited By:

Updated on: Mar 25, 2026 | 5:05 PM

ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (By_Election ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.

ದಾವಣಗೆರೆ, (ಮಾರ್ಚ್ 25): ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere Byelection ) ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಆದ್ರೆ, ಕಾಂಗ್ರೆಸ್‍ಗೆ(Congress) ಬಂಡಾಯದ ಬಿಸಿ ತಟ್ಟಿದ್ದು, ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ (Sadiq Pailwan) ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದೇ ಇಲ್ಲ ಎಂದು ಸವಾಲ್ ಹಾಕಿದ್ದಾರೆ. ಹೀಗಾಗಿ ಪೈಲ್ವಾನ್ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ ಬಗ್ಗೆ ಸಾಧಿಕ್ ಪೈಲ್ವಾನ್ ಏನೆಲ್ಲಾ ಮಾತನಾಡಿದ್ದಾರೆ ಕೇಳಿ.

ಇದನ್ನೂ ಓದಿ: ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More