ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ

Updated on: May 04, 2026 | 8:43 PM

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದು, ತಂದೆ ತಾಯಿ ಜೊತೆ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ.

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದು, ತಂದೆ ತಾಯಿ ಜೊತೆ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ.

ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು. ಅದರಂತೆ ಇದೀಗ ಪುತ್ರ ಸಮರ್ಥ ಸಹ ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ ತಂದೆ ರೀತಿಯಲ್ಲೇ ಚಿಕ್ಕ ವಯಸ್ಸಿನಲ್ಲೇ ಅಂದರೆ 27ನೇ ವಯಸ್ಸಿಗೆ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 04, 2026 08:38 PM
Follow Us