ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

Edited By:

Updated on: Apr 13, 2026 | 4:01 PM

ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆಗೊಂಡಿದ್ದು, ಧರ್ಮದರ್ಶಿ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈ ಕ್ರಮದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಪಂಚಮಸಾಲಿ ನಾಯಕರ ಬೆಳವಣಿಗೆಯನ್ನು ತಡೆಯುವ ಉದ್ದೇಶದಿಂದ ಈ ರೀತಿ ಸ್ವಾಮೀಜಿಗಳನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ದಾವಣಗೆರೆ, ಏಪ್ರಿಲ್​ 13: ನನ್ನ ಉಚ್ಚಾಟನೆ ಹಾಸ್ಯಾಸ್ಪದ. ಟ್ರಸ್ಟ್​ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್​ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ವಚನಾನಂದಶ್ರೀ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ವಾಸಪೀಠದಿಂದಲೇ ನನ್ನನ್ನು ಸಮಾಜ ಗುರುತಿಸಿದೆ. ಶ್ವಾಸಪೀಠ ಹಾಗೂ ನನ್ನ ಹೆಸರಿನಲ್ಲಿ ಒಂದು ಇಂಚು ಭೂಮಿ ಇಲ್ಲ. ಪೀಠಾಧ್ಯಕ್ಷರಾದ ಬಳಿಕ ಪೂರ್ವಶ್ರಮಕ್ಕೆ ಒಮ್ಮೆಯೂ ಭೇಟಿ ನೀಡಿಲ್ಲ ಎಂದು ಕಿರಿಕಾರಿದರು. ನಾನು ಲಕ್ಷಾಂತರ ಭಕ್ತರಿಗೆ ಉತ್ತರಿಸಬೇಕು, ಈ 12 ಜನರಿಗೆ ಉತ್ತರಿಸಲ್ಲ. ಟ್ರಸ್ಟ್​ನ ಸದಸ್ಯರು ಕೋಟ್ಯಂತರ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ತಮ್ಮ ಅವ್ಯವಹಾರ ಮುಚ್ಚಿ ಹಾಕಿಕೊಳ್ಳಲು ನನ್ನ ಟಾರ್ಗೆಟ್ ಮಾಡಿದ್ದಾರೆ. 2008ರಿಂದಲೂ ಪಂಚಮಸಾಲಿ ಗುರುಪೀಠದ ಲೆಕ್ಕವನ್ನು ಕೊಟ್ಟಿಲ್ಲ. ಇನ್ನು ಕಾನೂನು ಹೋರಾಟದ ಬಗ್ಗೆ ಭಕ್ತರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 13, 2026 03:52 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More