ದಾವಣಗೆರೆ ಬಂದ್: ಹದಡಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಸಾರಿಗೆ ಬಸ್ ಸಂಚಾರಕ್ಕೆ ತಡೆ
ಭದ್ರಾ ಡ್ಯಾಂನಿಂದ ಮೇಲ್ದಂಡೆ ಯೋಜನೆಗೆ ನೀರು ಬಿಡುಗಡೆ ಆದೇಶ ಹಾಗೂ ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ದಾವಣಗೆರೆ ಬಂದ್‌ಗೆ ಕರೆ ನೀಡಿದೆ. ಹದಡಿ ರಸ್ತೆ ಬಂದ್ ಮಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೂ ತಡೆಯೊಡ್ಡಿದರು.
ದಾವಣಗೆರೆ, ಸೆಪ್ಟೆಂಬರ್ 1: ದಾವಣಗೆರೆ ಬಂದ್ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ನಗರದ ಹದಡಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ನೇತೃತ್ವದಲ್ಲಿ ಸಾರಿಗೆ ಬಸ್ ತಡೆದು, ಚಾಲಕನಿಗೆ ಎಚ್ಚರಿಕೆ ನೀಡಲಾಯಿತು. ಇದೇ ವೇಳೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಭದ್ರಾ ಡ್ಯಾಂನಿಂದ ಮೇಲ್ದಂಡೆ ಯೋಜನೆಗೆ ನೀರು ಬಿಡುಗಡೆ ಆದೇಶ ವಿರೋಧಿಸಿ ಹಾಗೂ ಗುಟ್ಕಾ ನಿಷೇಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ದಾವಣಗೆರೆ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ಇದೇ ವೇಳೆ, ಟೈರ್‌ಗಳಿಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಿದ್ದಗಂಗಾ ಶಾಲೆ ಸೇರಿದಂತೆ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ

