ದಾವಣಗೆರೆ ಬಂದ್: ಹದಡಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಸಾರಿಗೆ ಬಸ್ ಸಂಚಾರಕ್ಕೆ ತಡೆ

Edited By:

Updated on: Sep 01, 2026 | 9:25 AM

ಭದ್ರಾ ಡ್ಯಾಂನಿಂದ ಮೇಲ್ದಂಡೆ ಯೋಜನೆಗೆ ನೀರು ಬಿಡುಗಡೆ ಆದೇಶ ಹಾಗೂ ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ದಾವಣಗೆರೆ ಬಂದ್‌ಗೆ ಕರೆ ನೀಡಿದೆ. ಹದಡಿ ರಸ್ತೆ ಬಂದ್ ಮಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೂ ತಡೆಯೊಡ್ಡಿದರು.

ದಾವಣಗೆರೆ, ಸೆಪ್ಟೆಂಬರ್ 1: ದಾವಣಗೆರೆ ಬಂದ್ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ನಗರದ ಹದಡಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ನೇತೃತ್ವದಲ್ಲಿ ಸಾರಿಗೆ ಬಸ್ ತಡೆದು, ಚಾಲಕನಿಗೆ ಎಚ್ಚರಿಕೆ ನೀಡಲಾಯಿತು. ಇದೇ ವೇಳೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಭದ್ರಾ ಡ್ಯಾಂನಿಂದ ಮೇಲ್ದಂಡೆ ಯೋಜನೆಗೆ ನೀರು ಬಿಡುಗಡೆ ಆದೇಶ ವಿರೋಧಿಸಿ ಹಾಗೂ ಗುಟ್ಕಾ ನಿಷೇಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ದಾವಣಗೆರೆ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ಇದೇ ವೇಳೆ, ಟೈರ್‌ಗಳಿಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಿದ್ದಗಂಗಾ ಶಾಲೆ ಸೇರಿದಂತೆ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More