ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ

Edited By: ವಿವೇಕ ಬಿರಾದಾರ

Updated on: Mar 18, 2025 | 10:25 AM

ದಾವಣಗೆರೆ ಜಿಲ್ಲೆಯ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕುಗಳ ನಡುವೆ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಬೇಸಿಗೆ ಬೆಳೆಗಳಿಗೆ ನೀರು ಪೂರೈಸುವ ಈ ಕಾಲುವೆಯ ಒಡೆದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣದ ದುರಸ್ತಿಗೆ ರೈತರು ಆಗ್ರಹಿಸುತ್ತಿದ್ದಾರೆ. ನೀರಿನ ಅಭಾವದಿಂದ ಬೇಸಿಗೆ ಬೆಳೆಗಳು ಹಾನಿಗೀಡಾಗುವ ಆತಂಕವಿದೆ.

ದಾವಣಗೆರೆ ಜಿಲ್ಲೆಯಿಂದ ಭದ್ರಾವತಿ ಕಡೆ ಮುಖ್ಯ ಕಾಲುವೆಗೆ ಸಂಪರ್ಕ ಕಲ್ಪಿಸುವ 20 ಮೀಟರ್ ಉದ್ದದ ತೂಗು ಕಾಲುವೆ ಒಡೆದು ಹೋಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಿಗ್ಗೆನಹಳ್ಳಿ ಹಾಗೂ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ನಡುವೆ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾ ಡ್ಯಾಂನಿಂದ ಈ ಕಾಲುವೆ ಮುಖಾಂತರ ಬೇಸಿಗೆ ಬೆಳೆಗೆ ನೀರು ಹರಿಸಲಾಗುತ್ತದೆ. ಇದೀಗ ಕಾಲುವೆ ಒಡೆದು ನೀರು ಹಳ್ಳ ಸೇರುತ್ತಿದೆ. ತಕ್ಷಣಕ್ಕೆ ಸೂಕ್ತ ಕ್ರಮ ಕೈಗೊಂಡು ದುರಸ್ಥಿ ಮಾಡಿ ರೈತರ ಜಮೀನಿಗೆ ನೀರು ಬಿಡುವಂತೆ ರೈತರು ಆಗ್ರಹಿಸಿದ್ದಾರೆ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More