ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ

Edited By:

Updated on: May 05, 2026 | 1:30 PM

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದ್ದರೂ, ಗೆಲುವಿನ ಅಂತರ ಚಿಂತೆಗೆ ಕಾರಣವಾಗಿದೆ. ಸುಮಾರು 22,000 ಮುಸ್ಲಿಂ ಮತಗಳು ಎಸ್ಡಿಪಿಐ ಮತ್ತು ಇತರ ಅಭ್ಯರ್ಥಿಗಳ ಪಾಲಾಗಿವೆ. ಇದು ಕಾಂಗ್ರೆಸ್‌ನಿಂದ ಮುಸ್ಲಿಂ ಸಮುದಾಯ ದೂರ ಸರಿಯುತ್ತಿರುವುದರ ಸ್ಪಷ್ಟ ಸೂಚನೆ ಎಂದು ವಿಶ್ಲೇಷಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ 40-50 ಕ್ಷೇತ್ರಗಳ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ದಾವಣಗೆರೆ, ಮೇ 05: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಕಾಂಗ್ರೆಸ್ ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿದೆ. ಇದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಸ್ಡಿಪಿಐ ಅಭ್ಯರ್ಥಿಗೆ ದಾಖಲೆಯ ಸುಮಾರು 19,000 ಮತಗಳು ಬಂದಿದ್ದು, ಇತರೆ ಮುಸ್ಲಿಂ ಅಭ್ಯರ್ಥಿಗಳಿಗೆ 2-3 ಸಾವಿರ ಮತಗಳು ಲಭಿಸಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಹಾನಿಯನ್ನುಂಟು ಮಾಡಬಹುದು ಎಂದು ವಿಶ್ಲೇಷಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎನ್ನಲಾಗ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More