AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 11, 2026 | 10:44 PM

Share

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲ ನಾಯಕರು ಫಂಡಿಂಗ್ ಮಾಡಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪಗಳು ಕೇಳಿಬಂದಿವೆ. ಎಐಸಿಸಿ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಹೇಳಿದ್ದಾರೆ. ತಮ್ಮ ಸಹೋದರ ಸಾದಿಕ್ ಪೈಲ್ವಾನ್ ಸಹ ಪಕ್ಷದ ಕೆಲಸದಲ್ಲಿ ಸಹಕರಿಸದಿರುವುದು ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ, ಏಪ್ರಿಲ್​ 11: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವರು ಹುನ್ನಾರ ನಡೆಸಿದ್ದರು. ಮತ್ತೆ ಕೆಲ ನಾಯಕರು ಫಂಡಿಂಗ್​​ ಸಹ ಮಾಡಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್​​ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಂಡಿಂಗ್ ಮಾಡಿದವರ ಬಗ್ಗೆ ಪಕ್ಷದ ಹೈಕಮಾಂಡ ಬಳಿ ಮಾಹಿತಿ ಇದೆ.‌ ಸೂಕ್ತ ಕ್ರಮಕೈಗೊಳ್ಳುತ್ತಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮೂರು ಸಲ ಎಂಎಲ್​​ಸಿ ಆಗಿದ್ದಾರೆ.‌ ಪಕ್ಷದ ಕೆಲಸ ಬಂದು ಮಾಡಿಬೇಕು. ಅದನ್ನ ಬಿಟ್ಟು ಕರೆದಿಲ್ಲ ಎಂದರೇ ಹೇಗೆ. ನನ್ನ ಸಹೋದರ ಸಾಧಿಕ್ ಪೈಲ್ವಾನ್ ಸ್ಪರ್ಧೆ ಮಾಡಲು ಮುಂದಾಗ ಸಿಎಂ ಸಿದ್ದರಾಮಯ್ಯ ನಮಗೆ ಫೋನ್​ ಮಾಡಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಗಿದೆ. ಒಂದಂತು ಸತ್ಯ ಈ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಗೆಲ್ಲುತ್ತಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More