ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

Edited By:

Updated on: Mar 28, 2026 | 3:29 PM

ದಾವಣಗೆರೆಯಲ್ಲಿ ಬಿಜೆಪಿ ಕಚೇರಿ ಎದುರು ಶಾಸಕ ಪ್ರದೀಪ್ ಈಶ್ವರ್ ಸವಾಲು ಹಾಕಿದ್ದು, ಕಾಂಗ್ರೆಸ್‌ನಲ್ಲಿ ಹೊಸ ಪೀಳಿಗೆ ಬಂದಿದೆ ಎಂದು ಗುಡುಗಿದರು. ಅಲ್ಪಸಂಖ್ಯಾತರನ್ನು ಬಿಜೆಪಿ ನಡೆಸಿಕೊಂಡ ರೀತಿ ಬಗ್ಗೆ ಟೀಕಿಸಿದ ಅವರು, ಕಾಂಗ್ರೆಸ್ ಸಮುದಾಯಕ್ಕೆ ಗೌರವ ನೀಡಿ ಸಬಲೀಕರಣಗೊಳಿಸುತ್ತಿದೆ ಎಂದರು. ಸಮರ್ಥ್ ಶಾಮನೂರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ದಾವಣಗೆರೆ, ಮಾರ್ಚ್​ 28: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ನಾಯಕರ ಅವಹೇಳನಕಾರಿ ಭಾಷಣದ ಆರೋಪ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶಾಸಕ ಪ್ರದೀಪ್ ಈಶ್ವರ್ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕಚೇರಿ ಮುಂದೆನೇ ಬಂದಿದ್ದೆ ಏನು ಮಾಡಿದರು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More