ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

Edited By:

Updated on: Mar 24, 2026 | 6:19 PM

ದಾವಣಗೆರೆ ದಕ್ಷಿಣ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಪತ್ನಿಯನ್ನು ಮುಸ್ಲಿಂ ಸಮುದಾಯದವರು ಆತ್ಮೀಯವಾಗಿ ಸ್ವಾಗತಿಸಿದರು. ಮತ ಯಾಚಿಸಲು ಬಂದ ಅಭ್ಯರ್ಥಿ ಪತ್ನಿಗೆ ಉಡಿ ತುಂಬುವ ಮೂಲಕ ಸಾಂಪ್ರದಾಯಿಕ ಗೌರವ ಸೂಚಿಸಲಾಯಿತು. ಸಮುದಾಯದ ಸಹಕಾರ ಕೋರಿದ ಅಭ್ಯರ್ಥಿ ಕುಟುಂಬ, ನೀರಿನ ವ್ಯವಸ್ಥೆ, ಚರಂಡಿ, ಆಸ್ಪತ್ರೆ ಸೇರಿದಂತೆ ಹಲವು ಅಭಿವೃದ್ಧಿ ಭರವಸೆಗಳನ್ನು ನೀಡಿತು.

ದಾವಣಗೆರೆ, ಮಾ.24: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬದವರು ಪ್ರಚಾರ ನಡೆಸುತ್ತಿದ್ದಾರೆ. ಮತ ಯಾಚಿಸಲು ತೆರಳಿದಾಗ ಮುಸ್ಲಿಂ ಸಮುದಾಯದವರು ಅಭ್ಯರ್ಥಿ ಪತ್ನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಪ್ರಚಾರದ ವೇಳೆ ಮಾತನಾಡಿದ ಅಭ್ಯರ್ಥಿಯ ಪ್ರತಿನಿಧಿಗಳು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ನಿಮ್ಮ ಮನೆಯ ಮಗ ಎಂದು ಪರಿಚಯಿಸಿದರು. ನೀರಿನ ವ್ಯವಸ್ಥೆ, ಚರಂಡಿ, ಮನೆ ಇಲ್ಲದವರಿಗೆ ಸೂರಿನ ವ್ಯವಸ್ಥೆ ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ ಎಂದು ಭರವಸೆ ನೀಡಿದರು. ಅಧಿಕಾರ ಸಿಕ್ಕರೆ ಈ ಕೆಲಸಗಳನ್ನು ನೆರವೇರಿಸುವುದಾಗಿ ಹೇಳಿದರು. ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸಿ, ಅಭಿವೃದ್ಧಿಗೆ ಅವಕಾಶ ನೀಡುವಂತೆ ಸಮುದಾಯದವರಲ್ಲಿ ಮನವಿ ಮಾಡಿಕೊಂಡರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More