ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!

Edited By:

Updated on: Mar 25, 2026 | 11:06 AM

ದಾವಣಗೆರೆ ದಕ್ಷಿಣ ಉಪಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಒಳಗಿನ ಅಸಮಾಧಾನ ಈಗ ಬಂಡಾಯದ ರೂಪ ಪಡೆದಿದೆ. ದಾವಣಗೆರೆ ರಾಜಕೀಯ ಕಣ ಮತ್ತಷ್ಟು ತೀವ್ರಗೊಂಡಿದ್ದು, ಉಪಚುನಾವಣೆಯ ದಿನಾಂಕ ಹತ್ತಿರವಾಗುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ, ಮಾರ್ಚ್ 25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸಾದಿಕ್ ಪೈಲ್ವಾನ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು ಅಹಿಂದ ಸಮುದಾಯವನ್ನು ಕಡೆಗಣಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನಾನು ಕಣಕ್ಕಿಳಿದಿದ್ದೇನೆ’ ಎಂದು ಹೇಳಿದರು. ಜನರು ಬದಲಾವಣೆ ಬಯಸುತ್ತಿದ್ದಾರೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More