ವರುಣನ ಅಬ್ಬರಕ್ಕೆ ದಾವಣಗೆರೆಯಲ್ಲಿ ಅಲ್ಲೋಲ ಕಲ್ಲೋಲ: ಅಡಿಕೆ ತೋಟ ಸರ್ವನಾಶ

Edited By:

Updated on: May 17, 2026 | 11:03 AM

ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ವ್ಯಾಪಕ ಅವಾಂತರ ಸೃಷ್ಟಿಸಿದೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಶಾಂತಗೌಡರ ಅಡಿಕೆ ತೋಟ ಸೇರಿ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ. ಮಳೆಗಾಳಿಗೆ ದೇವಸ್ಥಾನದ ತಗಡಿನ ಶೀಟ್‌ಗಳು ಸಹ ಹಾರಿಹೋಗಿದ್ದು, ಅಪಾರ ನಷ್ಟ ಸಂಭವಿಸಿದೆ.

ದಾವಣಗೆರೆ, ಮೇ 17: ಜಿಲ್ಲೆಯ ಹಲವೆಡೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯು ವ್ಯಾಪಕ ಅವಾಂತರಕ್ಕೆ ಕಾರಣವಾಗಿದೆ. ಬೇಸಿಗೆ ಮಳೆಯು ಆಲಿಕಲ್ಲು ಸಹಿತ ಅಪ್ಪಳಿಸಿದ್ದು, ಗಾಳಿಯ ರಭಸಕ್ಕೆ ದೇವಸ್ಥಾನದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಬಿರುಗಾಳಿ ಮತ್ತು ಮಳೆಯಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ. ಬಸವಾಪಟ್ಟಣ ಗ್ರಾಮದ ಶಾಂತಗೌಡರು ಎಂಬುವರ ತೋಟದಲ್ಲಿ ಅರ್ಧ ಎಕರೆಯಷ್ಟು ಅಡಿಕೆ ಮರಗಳು ಬುಡ ಸಮೇತ ಕಿತ್ತು ಬಿದ್ದಿವೆ. ಹತ್ತಾರು ವರ್ಷಗಳಿಂದ ಫಲ ನೀಡುತ್ತಿದ್ದ ಅಡಿಕೆ ಮರಗಳು ನೆಲಸಮಗೊಂಡಿರುವುದು ರೈತರಿಗೆ ಆರ್ಥಿಕ ನಷ್ಟ ಉಂಟುಮಾಡಿದೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಮಳೆಯಿಂದ ಉಂಟಾದ ಹಾನಿಯ ಪ್ರಮಾಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 17, 2026 11:03 AM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More