ದಾವಣಗೆರೆ: ಬೀಗ ಹಾಕಿದ್ದ ಮನೆಗೆ ಕನ್ನ, 40 ಗ್ರಾಂ ಚಿನ್ನ-ಬೆಳ್ಳಿ ಎಗರಿಸಿದ ಖದೀಮರು

Edited By:

Updated on: Sep 03, 2026 | 12:53 PM

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಾಲನಾಯಕನಕೋಟೆ ಗ್ರಾಮದಲ್ಲಿ ಬೀಗ ಹಾಕಿದ್ದ ಮನೆಗೆ ಕನ್ನ ಹಾಕಲಾಗಿದೆ. ಸುನಂದಮ್ಮ ಎಂಬುವವರ ಮನೆಯಿಂದ 40 ಗ್ರಾಂ ಚಿನ್ನ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ಕುಟುಂಬಸ್ಥರು ಸಂಬಂಧಿಕರ ಮನೆಗೆ ತೆರಳಿದ್ದಾಗ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಬಿಳಿಚೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ, ಸೆ.3: ಜಿಲ್ಲೆಯ ಜಗಳೂರು ತಾಲೂಕಿನ ಪಾಲನಾಯಕನಕೋಟೆ ಗ್ರಾಮದಲ್ಲಿ ಆತಂಕಕಾರಿ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗ್ರಾಮದ ಸುನಂದಮ್ಮ ಎಂಬುವರಿಗೆ ಸೇರಿದ ಮನೆಗೆ ಬೀಗ ಹಾಕಿದ್ದ ಸಂದರ್ಭದಲ್ಲಿ ಕಳ್ಳರು ಕನ್ನ ಹಾಕಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದನ್ನು ದೋಚಿದ್ದಾರೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ, ಸುನಂದಮ್ಮ ಅವರ ಮನೆಯಲ್ಲಿದ್ದ ಸುಮಾರು 40 ಗ್ರಾಂ ಚಿನ್ನ, ಬೆಳ್ಳಿ ಸಾಮಗ್ರಿಗಳು ಮತ್ತು ಸ್ವಲ್ಪ ಪ್ರಮಾಣದ ನಗದು ಕಳ್ಳತನವಾಗಿದೆ. ಕುಟುಂಬಸ್ಥರು ನಾಲ್ಕು ದಿನಗಳ ಹಿಂದೆ ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದರು. ಈ ಸಮಯವನ್ನೇ ಕಳ್ಳರು ಬಳಸಿಕೊಂಡಿದ್ದು, ಮನೆಯ ಬೀಗ ಮುರಿದು ಒಳನುಗ್ಗಿದ್ದಾರೆ. ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದ್ದು, ಕೂಡಲೇ ಮನೆಯವರು ಸ್ಥಳೀಯ ಬಿಳಿಚೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಳ್ಳರನ್ನು ಪತ್ತೆ ಹಚ್ಚಿ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More