ದಾವಣಗೆರೆ: ಗಾಂಜಾ ಕೇಸ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅರೆಸ್ಟ್
ದಾವಣಗೆರೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಶ್ಯಾಮನೂರು ವೇದಮೂರ್ತಿಯವರನ್ನು ಗಾಂಜಾ ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಜೊತೆಗೆ ರಾಜಸ್ಥಾನ ಮೂಲದ ಇನ್ನು ಮೂವರನ್ನು ಬಂಧಿಸಲಾಗಿದೆ. 11 ಲಕ್ಷ ರೂ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಡಿಯೋ ನೋಡಿ.
ದಾವಣಗೆರೆ, ಡಿಸೆಂಬರ್ 23: ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ದಾವಣಗೆರೆ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಶಾಮನೂರ ವೇದಮೂರ್ತಿ(53) ಬಂಧಿತ ವ್ಯಕ್ತಿ. ಬಂಧಿತರಿಂದ ಅಂದಾಜು 10 ಲಕ್ಷ ರೂ ಮೌಲ್ಯದ 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿದ ಒಂದು ಲಕ್ಷ ರೂ. ನಗದು ಹಣ ಸೇರಿದಂತೆ 11 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 23, 2025 07:18 PM
