AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್​​: ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!

ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್​​: ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Mar 20, 2026 | 11:20 AM

Share

ಕರ್ನಾಟಕ ಉಪಚುನಾವಣೆಗೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ನಡುವೆ ದಾವಣಗೆರೆ ದಕ್ಷಿಣದಲ್ಲಿ ಸಚಿವ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಮಲ್ಲಿಕಾರ್ಜುನ್ ಟಿಕೆಟ್ ಅಂತಿಮಗೊಳ್ಳುವ ಮುನ್ನವೇ ನಾಮಪತ್ರ ಸಲ್ಲಿಸಲು ಮುಂದಾಗಿರೋದು ಭಾರಿ ಕುತೂಹಲ ಮೂಡಿಸಿದೆ.

ದಾವಣಗೆರೆ, ಮಾರ್ಚ್​​ 20: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್‌ನಲ್ಲಿ ತೀವ್ರಗೊಂಡಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿರುವಾಗ, ಕಾಂಗ್ರೆಸ್‌ನಲ್ಲಿ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಈ ಹಿನ್ನೆಲೆಯಲ್ಲಿ, ರಣದೀಪ್ ಸುರ್ಜೇವಾಲ ಅವರು ರಾಜ್ಯಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ಚುನಾವಣಾ ತಂತ್ರ ರೂಪಿಸಲಿದ್ದಾರೆ. ಅದರ ನಡುವೆಯೇ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ, ಸಚಿವ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ. ಸಚಿವರ ಕುಟುಂಬದ ಈ ನಿರ್ಧಾರ ಭಾರಿ ಕುತೂಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರವಾಗಿರಬಹುದು ಎಂಬ ಮಾತುಗಳೂ ಕೇಳಿಬಂದಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 20, 2026 11:19 AM

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More