ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಬೈ ಎಲೆಕ್ಷನ್: ಕಾಂಗ್ರೆಸ್ ಟಿಕೆಟ್ ಯಾರಿಗೆ?
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು 2023ರ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಗೆಲ್ಲಿಸುತ್ತೇನೆ ಎಂದು ಹೇಳಿದ ವಿಡಿಯೋ ಕ್ಲಿಪ್ ಅನ್ನು ಅನೇಕ ಮುಖಂಡರು ನನಗೆ ತೋರಿಸಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ಹೆಚ್ಚಿರುವ ಕಾರಣ ಅನೇಕ ಆಕಾಂಕ್ಷಿಗಳು ನನ್ನ ಭೇಟಿಯಾಗಿದ್ದಾರೆ ಎಂದು ಜಮೀರ್ ಹೇಳಿದ್ದಾರೆ.
ದಾವಣಗೆರೆ, ಜನವರಿ 08: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರೋ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರಿದ್ದು, ಈ ಉಪಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿದೆ. ಶಾಮನೂರು ಶಿವಶಂಕರಪ್ಪ ಅವರು ಹಿಂದಿನ ಚುನಾವಣೆಯ ಸಂದರ್ಭದಲ್ಲಿ ತಾವು 2023ರ ಚುನಾವಣೆಯನ್ನು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಟಿಕೆಟ್ ನೀಡಿ, ಅವರನ್ನು ಗೆಲ್ಲಿಸಿಕೊಂಡು ಬರುವುದಾಗಿ ಅವರು ಸ್ವತಃ ಹೇಳಿದ್ದರು ಎಂದು ಹಲವು ಮುಖಂಡರು ನನಗೆ ವಿಡಿಯೋ ಕ್ಲಿಪ್ ಸಮೇತ ತೋರಿಸಿದ್ದಾರೆ. ಪಕ್ಷದ ಮುಖಂಡರಾದ ಶಾಮನೂರು ಶಿವಶಂಕರಪ್ಪ ಅವರ ಈ ಭರವಸೆಯನ್ನು ಮುಂದಿಟ್ಟುಕೊಂಡು ಅನೇಕರು ನನ್ನನ್ನು ಭೇಟಿ ಮಾಡಿದ್ದಾರೆ. ಆದ್ರೆ ಈ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ಹಿರಿಯ ನಾಯಕರು ಕೈಗೊಳ್ಳಲಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
