ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು

Edited By: ವಿವೇಕ ಬಿರಾದಾರ

Updated on: Jan 31, 2025 | 11:52 AM

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದ ರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ದಾವಣಗೆರೆಯ ಮಣಿಕಂಠ ಲಕ್ಷ್ಮಣ್ ಪುರುಷರ 200 ಮೀಟರ್ ಬ್ರೆಸ್ಟ್‌ ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು 2 ನಿಮಿಷ 21 ಸೆಕೆಂಡುಗಳಲ್ಲಿ ಗುರಿ ತಲುಪಿದರು. ದಾವಣಗೆರೆಯ ಈಜುಕೊಳದಲ್ಲಿ ವರ್ಷಗಳ ತರಬೇತಿಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಕರ್ನಾಟಕಕ್ಕೆ ಒಟ್ಟು 12 ಪದಕಗಳು ಈ ಸ್ಪರ್ಧೆಯಲ್ಲಿ ಬಂದಿವೆ.

ಉತ್ತರಾಖಂಡ ರಾಜ್ಯದ ಡೆಹ್ರಾಡೂನ್​ನಲ್ಲಿ ನಡೆದ ರಾಷ್ಟ್ರೀಯ ಈಜು ಸ್ಪರ್ಧೆಗಳಲ್ಲಿ ದಾವಣಗೆರೆಯ ಮಣಿಕಂಠ ಲಕ್ಷ್ಮಣ ಪುರುಷರ ವಿಭಾಗದ 200 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಯಲ್ಲಿ 2 ನಿಮಿಷ 21 ಸೆಕೆಂಡ್​ನಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದಿದ್ದಾರೆ. ಮಣಿಕಂಠ ಅವರು ದಾವಣಗೆರೆ ನಗರದ ಈಜುಕೊಳದಲ್ಲಿ ಹಲವಾರು ವರ್ಷಗಳಿಂದ ತರಬೇತಿ ಪಡೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ತರಬೇತಿ ಪಡೆಯುತ್ತಿದ್ದಾರೆ. ಮಣಿಕಂಠ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ ಒಟ್ಟು 12 ಪದಕಗಳು ಬಂದಿವೆ.

Published on: Jan 31, 2025 11:07 AM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More