ದಾವಣಗೆರೆ: ಜಾತಿ ಸಮೀಕ್ಷೆ ವೇಳೆ ಶಿಕ್ಷಕನಿಗೆ ಹೃದಯಾಘಾತ, ಮಾನಸಿಕ ಒತ್ತಡ ಕಾರಣವಾಯ್ತಾ ಎಂಬ ಅನುಮಾನ

Updated By: Ganapathi Sharma

Updated on: Oct 07, 2025 | 9:34 AM

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಮಾಡುವ ಸಂದರ್ಭದಲ್ಲಿ ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಶಾಲೆಯ ಶಿಕ್ಷಕ ಶಿಕ್ಷಕ ಪ್ರಕಾಶ್ ನಾಯಕ್ ಎಂಬವರಿಗೆ ಹೃದಯಾಘಾತ ಸಂಭವಿಸಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮೀಕ್ಷೆಯ ವೇಳೆ ಸಿಬ್ಬಂದಿ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ದಾವಣಗೆರೆ, ಅಕ್ಟೋಬರ್ 7: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವೇಳೆ ದಾವಣಗೆರೆ ತಾಲ್ಲೂಕಿನ ಹಳೆಕಡ್ಲೆಬಾಳು ಶಾಲೆಯ ಶಿಕ್ಷಕರೊಬ್ಬರಿಗೆ ಹೃದಯಾಘಾತವಾಗಿದೆ. ಶಿಕ್ಷಕ ಪ್ರಕಾಶ್ ನಾಯಕ್ (44)ಗೆ ಹೃದಯಾಘಾತವಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿ ಸ್ಟೆಂಟ್ ಅಳವಡಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಶಿಕ್ಷಕ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಡಿಸಿ ಜಿಎಂ ಗಂಗಾಧರ ಸ್ವಾಮಿ ಫೋನ್ ಮೂಲಕ ಪ್ರಕಾಶ್ ನಾಯಕ್​ಗೆ ಧೈರ್ಯ ತುಂಬಿದರು. ಸಮೀಕ್ಷೆ ವೇಳೆ ಸಿಬ್ಬಂದಿ ಸಾಕಷ್ಟು ಕಿರುಕುಳ ಎದುರಿಸುತ್ತಿದ್ದಾರೆ. ಇದರಿಂದಾಗಿ ಅವರು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಪ್ರಕಾಶ್ ನಾಯಕ್ ಜತೆಗಿದ್ದವರು ಡಿಸಿ ಜಿಎಂ ಗಂಗಾಧರ ಸ್ವಾಮಿ ಬಳಿ ಫೋನ್​ನಲ್ಲಿ ದೂರುತ್ತಿರುವುದೂ ಕಂದುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published on: Oct 07, 2025 09:34 AM