AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಶನ್ ಶೋ ಮೂಲಕ ಮತದಾನ ಜಾಗೃತಿ; ದಾವಣಗೆರೆ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ

ಫ್ಯಾಶನ್ ಶೋ ಮೂಲಕ ಮತದಾನ ಜಾಗೃತಿ; ದಾವಣಗೆರೆ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 21, 2024 | 5:17 PM

Share

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಿನ್ನಲೆ ಮತದಾರರಲ್ಲಿ ಮತದಾನ ಜಾಗೃತಿ(Voting awareness) ಮೂಡಿಸಲು ದಾವಣಗೆರೆ(Davanagere)  ಜಿಲ್ಲಾಡಳಿತ ವಿನೂತನ ಪ್ರಯತ್ನ ಮಾಡಿದೆ. ಹೌದು, ನಗರದ ಗ್ಲಾಸ್ ಹೌಸ್​ನಲ್ಲಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರ ಫ್ಯಾಶನ್ ಶೋ ಮೂಲಕ ಮತದಾನ ಜಾಗೃತಿಗೆ ಮುಂದಾಗಿದೆ.

ದಾವಣಗೆರೆ, ಏ.21: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಿನ್ನಲೆ ಮತದಾರರಲ್ಲಿ ಮತದಾನ ಜಾಗೃತಿ(Voting awareness) ಮೂಡಿಸಲು ದಾವಣಗೆರೆ(Davanagere)  ಜಿಲ್ಲಾಡಳಿತ ವಿನೂತನ ಪ್ರಯತ್ನ ಮಾಡಿದೆ. ಹೌದು, ನಗರದ ಗ್ಲಾಸ್ ಹೌಸ್​ನಲ್ಲಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರ ಫ್ಯಾಶನ್ ಶೋ ಮೂಲಕ ಮತದಾನ ಜಾಗೃತಿಗೆ ಮುಂದಾಗಿದೆ.ಇಂದು(ಏ.21) ರಜೆ ದಿನ ಇರುವ ಹಿನ್ನಲೆ ಗ್ಲಾಸ್ ಹೌಸ್​ಗೆ ಭೇಟಿ ನೀಡುವ ಜನರಿಗೆ ಮೇ 07ರಂದು ಕಡ್ಡಾಯ ಮತದಾನ ಮಾಡುವಂತೆ ದೇಸಿಯ ವೇಷ ಭೂಷಣ ಧರಿಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More