AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!

ಝಾಹಿರ್ ಯೂಸುಫ್
|

Updated on: Apr 22, 2026 | 4:17 PM

Share

David Miller: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಇದೇ ಮಿಲ್ಲರ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರೋಚಕ ಜಯ ತಂದು ಕೊಟ್ಟಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 176 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ತಂಡಕ್ಕೆ ಕೊನೆಯ ಓವರ್‌ನಲ್ಲಿ 15 ರನ್ಗಳ ಅವಶ್ಯಕತೆಯಿತ್ತು.

RCB ವಿರುದ್ಧ ಹೀರೋ SRH ವಿರುದ್ಧ ಝೀರೋ… ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೀರೋ ಎನಿಸಿಕೊಂಡಿದ್ದ ಡೇವಿಡ್ ಮಿಲ್ಲರ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಝೀರೋಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ.

ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಡೇವಿಡ್ ಮಿಲ್ಲರ್ (0) ಈಶಾನ್ ಮಲಿಂಗಾ ಎಸೆದ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು.

ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಇದೇ ಮಿಲ್ಲರ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರೋಚಕ ಜಯ ತಂದು ಕೊಟ್ಟಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 176 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ತಂಡಕ್ಕೆ ಕೊನೆಯ ಓವರ್‌ನಲ್ಲಿ 15 ರನ್ಗಳ ಅವಶ್ಯಕತೆಯಿತ್ತು.

ವೆಸ್ಟ್ ಇಂಡೀಸ್‌ನ ವೇಗಿ ರೊಮಾರಿಯೋ ಶೆಫರ್ಡ್ ಎಸೆದ ಕೊನೆಯ ಓವರ್‌ನ ಮೊದಲ ಎರಡು ಎಸೆತಗಳಲ್ಲಿ ಕೇವಲ 2 ರನ್ ಬಂದವು. ಆದರೆ ಬಳಿಕ ಡೇವಿಡ್ ಮಿಲ್ಲರ್  ಸತತವಾಗಿ 6, 6, 4 ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಥ್ರಿಲ್ಲರ್ ಗೆಲುವು ತಂದುಕೊಟ್ಟಿದ್ದರು.

ಇದೇ ಕಾರಣದಿಂದಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ ಅವರನ್ನು 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಗಿತ್ತು. ಆದರೆ ಈ ಬಾರಿ ಗೋಲ್ಡನ್ ಡಕ್​ಗೆ ಔಟಾಗುವ ಮೂಲಕ ಮಿಲ್ಲರ್ ನಿರಾಸೆ ಮೂಡಿಸಿದ್ದಾರೆ.

 

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More