ವಕ್ಫ್ ತಿದ್ದುಪಡಿ ಕಾಯ್ದೆಗೆ ಧನ್ಯವಾದ ಸಲ್ಲಿಸಲು ಪ್ರಧಾನಿ ಮೋದಿಯನ್ನು ಭೇಟಿಯಾದ ಮುಸ್ಲಿಮರ ನಿಯೋಗ
ವಕ್ಫ್ ತಿದ್ದುಪಡಿ ಕಾಯ್ದೆಗೆ ಕೃತಜ್ಞತೆ ಸಲ್ಲಿಸಲು ದಾವೂದಿ ಬೊಹ್ರಾ ಸಮುದಾಯದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಈ ಸಭೆಯ ಸಂದರ್ಭದಲ್ಲಿ ಮೋದಿಗೆ ಧನ್ಯವಾದ ತಿಳಿಸಿದ ಬೊಹ್ರಾ ಸಮುದಾಯದ ಸದಸ್ಯರು ಇದು ಬಹಳ ದಿನಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ. ಇದನ್ನು ಈಗ ಈಡೇರಿಸಲಾಗಿದೆ ಎಂದು ಹೇಳಿದ್ದಾರೆ."ಪ್ರಧಾನ ಮಂತ್ರಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ದೃಷ್ಟಿಕೋನದಲ್ಲಿ ದಾವೂದಿ ಬೊಹ್ರಾ ಸಮುದಾಯವು ನಂಬಿಕೆ ಇಟ್ಟಿದೆ" ಎಂದು ಅವರು ಹೇಳಿದ್ದಾರೆ.
ನವದೆಹಲಿ, ಏಪ್ರಿಲ್ 17: ಇತ್ತೀಚೆಗೆ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆ, 2025ಕ್ಕೆ (Waqf Amendment Act) ಕೃತಜ್ಞತೆ ಸಲ್ಲಿಸಲು ದಾವೂದಿ ಬೊಹ್ರಾ ಸಮುದಾಯದ ನಿಯೋಗ (Dawoodi Bohra Delegation)
ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಇದು ದಾವೂದಿ ಬೊಹ್ರಾ ಸಮುದಾಯದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಯಾಗಿತ್ತು ಎಂದು ಕರೆದಿದೆ. ನಾವು ಪ್ರಧಾನಮಂತ್ರಿಯ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಎಂಬ ದೃಷ್ಟಿಕೋನದಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಅವರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ದಾವೂದಿ ಬೊಹ್ರಾಗಳು ಪಶ್ಚಿಮ ಭಾರತದ ಮುಸ್ಲಿಂ ಸಮುದಾಯವಾಗಿದ್ದು, ಈ ಸಮುದಾಯದವರು ಪ್ರಪಂಚದಾದ್ಯಂತ 40ಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿದ್ದಾರೆ. ಈ ಮೂಲಕ ಭಾರತದ ಎಲ್ಲ ಮುಸ್ಲಿಮರೂ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧವಿಲ್ಲ ಎಂಬುದು ಸ್ಪಷ್ಟವಾದಂತಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ