ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ

Updated on: Mar 28, 2026 | 8:06 AM

ಜನಸಂಚಾರ ಇರುವ ಸ್ಥಳದಲ್ಲೇ ಹಾಡಹಗಲೇ ಮಹಿಳೆಯೊಬ್ಬರ ಕುತ್ತಿಗೆಯಿಂದ ಕಳ್ಳರು ಮಾಂಗಲ್ಯ ಸರ ಕಿತ್ತುಕೊಂಡು ಹೋದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿಯ ಅಂಗಡಿಯೊಂದರಲ್ಲಿ ನಡೆದಿದೆ. ಇಂತಹ ಕಳ್ಳತನ ನಡೆದಿರುವುದು ಸ್ಥಳೀಯರಲ್ಲಿ ಭಯ ಹುಟ್ಟಿಸಿದ್ದು, ಪೊಲೀಸರು ಗಸ್ತು ಹೆಚ್ಚಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ.

ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರು ಕ್ಷಣಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ ಎಳೆದ ರಭಸಕ್ಕೆ ಮಹಿಳೆ ನೆಲಕ್ಕುರುಳಿದ್ದಾರೆ. ಸುಮಾರು 55 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದೊಯ್ಯಲಾಗಿದೆ.

ಸರ ಕಳವಿನ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More