Video: ಥಾರ್​ನಲ್ಲಿ ಬಂದು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

Updated on: Jan 04, 2026 | 1:03 PM

ಥಾರ್​ನಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗಾಜಿಯಾಬಾದ್​ನ ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಲೆನೊ ಕಾರಿಗೆ ಮೂರು ಗುಂಡುಗಳು ತಗುಲಿವೆ. ಸಿಕ್ರೋಡ್ ನಿವಾಸಿ ಸುನಿಲ್ ಕುಮಾರ್, ಮುಖ್ಯ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ, ಅವರ ಮಗ ಶುಭಮ್ ಮನೆಯ ಬಳಿ ನಿಂತಿದ್ದರು, ಅವರ ಇನ್ನೊಬ್ಬ ಮಗ ಹರ್ಷ್ ತನ್ನ ಸ್ನೇಹಿತ ಅಂಕುರ್ ಜೊತೆ ಬಲೆನೊ ಕಾರಿನಲ್ಲಿದ್ದರು. ಮೀರತ್ ರಸ್ತೆಯಿಂದ ಬರುತ್ತಿದ್ದ ಕಪ್ಪು ಬಣ್ಣದ ಥಾರ್, ಬಲೆನೊ ಕಾರನ್ನು ಸಮೀಪಿಸುತ್ತಿದ್ದಂತೆ ಕಾರಿನಲ್ಲಿದ್ದ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು.

ಗಾಜಿಯಾಬಾದ್, ಜನವರಿ 04: ಥಾರ್​ನಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗಾಜಿಯಾಬಾದ್​ನ ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಲೆನೊ ಕಾರಿಗೆ ಮೂರು ಗುಂಡುಗಳು ತಗುಲಿವೆ. ಸಿಕ್ರೋಡ್ ನಿವಾಸಿ ಸುನಿಲ್ ಕುಮಾರ್, ಮುಖ್ಯ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ, ಅವರ ಮಗ ಶುಭಮ್ ಮನೆಯ ಬಳಿ ನಿಂತಿದ್ದರು, ಅವರ ಇನ್ನೊಬ್ಬ ಮಗ ಹರ್ಷ್ ತನ್ನ ಸ್ನೇಹಿತ ಅಂಕುರ್ ಜೊತೆ ಬಲೆನೊ ಕಾರಿನಲ್ಲಿದ್ದರು. ಮೀರತ್ ರಸ್ತೆಯಿಂದ ಬರುತ್ತಿದ್ದ ಕಪ್ಪು ಬಣ್ಣದ ಥಾರ್, ಬಲೆನೊ ಕಾರನ್ನು ಸಮೀಪಿಸುತ್ತಿದ್ದಂತೆ ಕಾರಿನಲ್ಲಿದ್ದ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More