Video: ಹಾಡಹಗಲೇ ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಿಸಿದ ಶಸ್ತ್ರಸಜ್ಜಿತ ಗುಂಪು

Updated on: Jun 22, 2025 | 2:36 PM

ಸ್ತ್ರಸಜ್ಜಿತ ಗುಂಪೊಂದು ಹಾಡಹಗಲೇ ಮನೆಗೆ ನುಗ್ಗಿ ಮಾಲೀಕನಿಗೆ ಗುಂಡು ಹಾರಿಸಿ ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಅಪಹರಿಸಿರುವ ಘಟನೆ ಮಧ್ಯಪ್ರದೇಶದ ಛತ್ತರ್​​ಪುರದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಸ್ತೂಲ್, ರಾಡ್​ಗಳನ್ನು ಹಿಡಿದು ಬಂದಿದ್ದ ಗುಂಪು, ಹರಿರಾಮ್ ಪಾಲ್ ಅವರ ಮನೆಗೆ ನುಗ್ಗಿದ್ದರು. ದಾಳಿಕೋರರು ಒಂದು ಎಸ್‌ಯುವಿ ಮತ್ತು ಹಲವು ಬೈಕ್​ಗಳಲ್ಲಿ ಬಂದಿದ್ದರು.ಹರಿರಾಮ್ ಗೆ ಗುಂಡು ತಗುಲಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ನಂತರ ದಾಳಿಕೋರರು ಹರಿರಾಮ್ ಅವರ ಪತ್ನಿ ಮತ್ತು ಏಳು ಮತ್ತು ಐದು ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಅಪಹರಿಸಿದ್ದಾರೆ.

ಛತ್ತರ್​​ಪುರ್, ಜೂನ್ 22: ಶಸ್ತ್ರಸಜ್ಜಿತ ಗುಂಪೊಂದು ಹಾಡಹಗಲೇ ಮನೆಗೆ ನುಗ್ಗಿ ಮಾಲೀಕನಿಗೆ ಗುಂಡು ಹಾರಿಸಿ ಹೆಂಡತಿ, ಇಬ್ಬರು ಹೆಣ್ಣುಮಕ್ಕಳನ್ನು ಅಪಹರಿಸಿರುವ ಘಟನೆ ಮಧ್ಯಪ್ರದೇಶದ ಛತ್ತರ್​​ಪುರದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಸ್ತೂಲ್, ರಾಡ್​ಗಳನ್ನು ಹಿಡಿದು ಬಂದಿದ್ದ ಗುಂಪು, ಹರಿರಾಮ್ ಪಾಲ್ ಅವರ ಮನೆಗೆ ನುಗ್ಗಿದ್ದರು. ದಾಳಿಕೋರರು ಒಂದು ಎಸ್‌ಯುವಿ ಮತ್ತು ಹಲವು ಬೈಕ್​ಗಳಲ್ಲಿ ಬಂದಿದ್ದರು.ಹರಿರಾಮ್ ಗೆ ಗುಂಡು ತಗುಲಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ನಂತರ ದಾಳಿಕೋರರು ಹರಿರಾಮ್ ಅವರ ಪತ್ನಿ ಮತ್ತು ಏಳು ಮತ್ತು ಐದು ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಅಪಹರಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More