Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು

Updated on: Jan 22, 2026 | 10:16 AM

ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ.

ನವದೆಹಲಿ, ಜನವರಿ 22: ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ. ಪಕ್ಕದಲ್ಲಿದ್ದ ಜನರು ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದಾರೆಯೇ ವಿನಃ ಯಾರೂ ಕೂಡ ಅವರನ್ನು ಬದುಕಿಸುವ ಪ್ರಯತ್ನ ಮಾಡಲಿಲ್ಲ. ಮೃತರನ್ನು ಆಕಾಶ್ ಎಂದು ಗುರುತಿಸಲಾಗಿದೆ.ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ