Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ಹನಿಗಳನ್ನು ಹಾಕುವ ಮೂಲಕ ಈ ಮಹತ್ವದ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ಚಾಲನೆ ನೀಡಿದರು. ಲಸಿಕೆ ಹಾಕುವ ಮುನ್ನ ಡಿ.ಕೆ. ಶಿವಕುಮಾರ್ ಮಕ್ಕಳೊಂದಿಗೆ ಸಂವಹನ ನಡೆಸಿದ್ದು, ಪೋಲಿಯೋ ಹನಿಗಳನ್ನು ಹಾಕಿದ ನಂತರ ಮಕ್ಕಳಿಗೆ ಚಾಕೊಲೇಟ್‌ಗಳು ಮತ್ತು ಸಿಹಿ ತಿನಿಸುಗಳನ್ನು ನೀಡಲಾಯಿತು. ಈ ಅಭಿಯಾನವು ಪೋಲಿಯೋ ಮುಕ್ತ ಕರ್ನಾಟಕ ನಿರ್ಮಿಸುವ ಗುರಿಯನ್ನು ಹೊಂದಿದ್ದು, ಸಾರ್ವಜನಿಕ ಆರೋಗ್ಯ ಸುಧಾರಣೆಗೆ ಸರ್ಕಾರದ ಬದ್ಧತೆಯನ್ನು ಎತ್ತಿ ಹಿಡಿಯುತ್ತದೆ. ಈ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೊಮ್ಮಗಳಿಗೂ ಪೋಲಿಯೋ ಹನಿಗಳನ್ನು ನೀಡಲಾಯಿತು.
ಬೆಂಗಳೂರು, ಡಿಸೆಂಬರ್ 21: ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಈ ಮಹತ್ವದ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ಚಾಲನೆ ನೀಡಿದರು. ಲಸಿಕೆ ಹಾಕುವ ಮುನ್ನ ಡಿ.ಕೆ. ಶಿವಕುಮಾರ್ ಮಕ್ಕಳನ್ನು ಮುದ್ದಾಡಿದ್ದು, ಪೋಲಿಯೋ ಹನಗಳನ್ನು ಹಾಕಿದ ನಂತರ ಮಕ್ಕಳಿಗೆ ಚಾಕೊಲೇಟ್‌ಗಳು ಮತ್ತು ಸಿಹಿ ತಿನಿಸುಗಳನ್ನು ನೀಡಲಾಯಿತು. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೊಮ್ಮಗಳಿಗೂ ಪೋಲಿಯೋ ಹನಿಗಳನ್ನು ನೀಡಲಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 21, 2025 01:19 PM
