AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ನೋಡಿ

ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ನೋಡಿ

ಹರೀಶ್ ಜಿ.ಆರ್​.
| Edited By: |

Updated on: Mar 19, 2026 | 3:36 PM

Share

ಕೆ.ಸಿ. ವೇಣುಗೋಪಾಲ್ ಅವರ ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲ ಶಾಸಕರಿಂದ ಮಂತ್ರಿ ಸ್ಥಾನದ ಬೇಡಿಕೆ ವಿಚಾರ ಸಂಬಂಧಿತ ಪ್ರಶ್ನೆಗೂ ಉತ್ತರಿಸಿದ ಅವರು, ಮಂತ್ರಿ ಆಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನಾರಚನೆ ಬಗ್ಗೆ ಸಿಎಂ ಹೇಳಿದ್ದಕ್ಕೆ ಕೆಲವರು ಆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರೋದಾಗಿ ಹೇಳಿದ್ದಾರೆ.

ಬೆಂಗಳೂರು, ಮಾರ್ಚ್​​ 19: ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಪ್ರತಿಕ್ರಿಯಿಸಿದ್ದಾರೆ. ಅವರ ಹೇಳಿಕೆಯನ್ನು ನಾನು ಗಮನಿಸಿದ್ದು, ಪಕ್ಷ ಮತ್ತು ಶಾಸಕರು ತೀರ್ಮಾನಿಸೋದಾಗಿಯೂ ಅವರು ತಿಳಿಸಿರೋದಾಗಿ ಡಿಕೆಶಿ ಹೇಳಿದ್ದಾರೆ. ಕೆಲ ಶಾಸಕರಿಂದ ಸಚಿವ ಸ್ಥಾನದ ಬೇಡಿಕೆ ವಿಚಾರವಾಗಿಯೂ ಮಾತನಾಡಿದ ಅವರು, ಮಂತ್ರಿ ಆಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪಿಲ್ಲ. ಸಂಪುಟ ಪುನಾರಚನೆ ಬಗ್ಗೆ ಸಿಎಂ ಹೇಳಿದ್ದಕ್ಕೆ ಕೆಲವರು ಆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಎಂಬ ಬಗ್ಗೆ ಕಾಲ ನಿರ್ಣಯ ಮಾಡಲಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us