ಒಂದೇ ವೇದಿಕೆ ಮೇಲೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಮುಖಾಮುಖಿ
ಒಂದೇ ವೇದಿಕೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಾಲಾನಂದಶ್ರೀಗಳು ಭಾಗಿಯಾಗಿದ್ದಾರೆ.
ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆಯುತ್ತಿರುವ ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಮುಖಾಮುಖಿಯಾಗಿದ್ದಾರೆ. ಒಂದೇ ವೇದಿಕೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಾಲಾನಂದಶ್ರೀಗಳು ಭಾಗಿಯಾಗಿದ್ದಾರೆ. ಈ ವೇಳೆ ಶ್ರೀಗಳು ಇಬ್ಬರು ನಾಯಕರಿಗೂ ಪರಸ್ಪರ ರಾಜಕೀಯವಾಗಿ ಬೈದಾಡಿಕೊಳ್ಳದಂತೆ ಕಿವಿ ಮಾತು ಕೇಳಿದ್ದಾರೆ.
ನನ್ನ ಹುಟ್ಟು ಹೆಸರು ಕೆಂಪೇಗೌಡ ಎಂದ ಅಶ್ವತ್ಥ್ ನಾರಾಯಣ
ವೇದಿಕೆ ಮೇಲೆ ಮಾತನಾಡಿದ ಅಶ್ವತ್ಥ್ ನಾರಾಯಣ,ನಾನು ಯಾವುದೇ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿಲ್ಲ. ನಾಡಿಗೆ ಒಳಿತು ಮಾಡಬೇಕೆಂದು ರಾಜಕೀಯಕ್ಕೆ ಬಂದಿದ್ದೇವೆ. ಡಿ.ಕೆ.ಶಿವಕುಮಾರ್, ನನ್ನ ನಡುವೆ ಯಾವುದೇ ವೈಮನಸ್ಸು ಇಲ್ಲ. ರಾಜಕೀಯದಲ್ಲಿ ಸುಮ್ಮನೆ ಇದ್ರೆ ಆಗುತ್ತಾ. ಪ್ರೇಕ್ಷಕರು ಅಂತಾರೆ, ಅದಕ್ಕೆ ಏನು ಹೇಳಬೇಕೋ ಹೇಳಿದ್ದೇನೆ. ರಾಮನಗರಕ್ಕೆ ಯಾವ ಸರ್ಕಾರ ಕೊಡದಷ್ಟು ಯೋಜನೆ ಕೊಟ್ಟಿದ್ದೇವೆ. ರಾಮನಗರ ನನ್ನ ಪೂರ್ವಿಕರ ಕರ್ಮಭೂಮಿ. ನನ್ನ ಹುಟ್ಟು ಹೆಸರು ಕೆಂಪೇಗೌಡ . ಮುಂದಿನ ದಿನಗಳಲ್ಲಿ ಎಲ್ಲಾ ಇತಿಹಾಸವೂ ಗೊತ್ತಾಗಲಿದೆ. ಕೆಂಪೇಗೌಡರು ಮಾಡಿದ 5% ಅಭಿವೃದ್ಧಿಯನ್ನ ಈ ಸರ್ಕಾರ ಮಾಡಲಿ. ನಾವು ರಾಮನಗರ ಅಭಿವೃದ್ಧಿ ಮಾಡಿದ್ದೇವೆ ಎಂದರು.