ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಡಿಸಿಎಂ ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ಭೇಟಿ

Updated on: May 22, 2025 | 12:12 PM

ಈಡಿ ಅಧಿಕಾರಿಗಳು ಜಿ ಪರಮೇಶ್ವರ್ ಸ್ವಾಮ್ಯದ ಸಿದ್ಧಾರ್ಥ ಮೆಡಿಕಲ್ ಕಾಲೇಜು, ಶ್ರೀ ಸಿದ್ಧಾರ್ಥ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಟಿ ಬೇಗೂರಿನಲ್ಲಿರುವ ಅವರ ಮತ್ತೊಂದು ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಏತನ್ಮಧ್ಯೆ, ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪರಮೇಶ್ವರ್, ಜಾರಿಗೆ ನಿರ್ದೇಶನಾಲಯದ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರು, ಮೇ 22: ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ್ದು ಕಾಗದ ಪತ್ರಗಳು ಮತ್ತು ಹಣದ ವಹಿವಾಟಿನ ಪರಿಶೀಲನೆ 24 ಗಂಟೆ ಕಳೆದರೂ ನಡೆಯುತ್ತಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಲೋಕೋಪಯೋಗಿ ಖಾತೆ ಸಚಿವ ಸತೀಶ್​ ಜಾರಕಿಹೊಳಿ ಇಂದು ಬೆಳಗ್ಗೆ ಪರಮೇಶ್ವರ್ ನಿವಾಸಕ್ಕೆ ತೆರಳಿ ಅವರೊಂದಿಗೆ ಮಾತಾಡಿದರು. ಮೊದಲು ಶಿವಕುಮಾರ್ ನಂತರ ಸತೀಶ್ ಜಾರಕಿಹೊಳಿ ಕಾರಲ್ಲಿ ಆಗಮಿಸುವುದನ್ನು ಗಮನಿಸಬಹುದು.

ಇದನ್ನೂ ಓದಿ:   ರನ್ಯಾ ರಾವ್ ಖಾತೆಗೆ 40 ಲಕ್ಷ ರೂ. ವರ್ಗಾವಣೆ ಆರೋಪ: ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮುಂದುವರಿದ ಇಡಿ ಶೋಧ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ