Loading video

ತಮಗೊಂದು ಗ್ಯಾರಂಟಿ ಯೋಜನೆ: ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಡಿಸಿಎಂ

Updated on: Nov 14, 2024 | 10:05 PM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ನವೆಂಬರ್ 14) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಲಾ ಮಕ್ಕಳ ಜೊತೆ ಸಂವಾದ ನಡೆಸಿದರು. ಈ ವೇಳೆ ವಿದ್ಯಾರ್ಥಿಯೋರ್ವ ತಮಗೆ ಗ್ಯಾರಂಟಿ ಯೋಜನೆ ಬಗ್ಗೆ ಪ್ರಶ್ನೆ ಕೇಳಿದ್ದಾನೆ. ಇದಕ್ಕೆ ಡಿಕೆ ಶಿವಕುಮಾರ್ ನಗುತ್ತಲ್ಲೇ ಉತ್ತರಿಸಿದ್ದಾರೆ.

ಬೆಂಗಳೂರು, (ನವೆಂಬರ್ 14): ಮಕ್ಕಳ ದಿನಾಚರಣೆ ಅಂಗವಾಗಿ ನಮ್ಮ ಮಕ್ಕಳು ನಮ್ಮ ಭವಿಷ್ಯ ಎಂಬ ಹೆಸರಿನಡಿ ಸಂವಾದ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಲಾ ವಿದ್ಯಾರ್ಥಿಗಳು ನಾನಾ ಪ್ರಶ್ನೆಗಳು ಕೇಳಿದರು. ಅದರಲ್ಲೂ ನೀಲಸಂದ್ರದ ಪಾಲಿಕೆ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ಚರಣ್ ತಮಗೆ ಗ್ಯಾರಂಟಿ ಯೋಜನೆ ಬಗ್ಗೆ ಪ್ರಶ್ನೆ ಕೇಳಿದ್ದಾನೆ. ನೀವು 5 ಗ್ಯಾರಂಟಿ ನೀಡಿದ್ದೀರಿ, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ನಮ್ಮ ಅಮ್ಮ ಅಕ್ಕ ತಂಗಿಯರನ್ನು ಮಾತ್ರ ಊರಿಗೆ ಕರೆದುಕೊಂಡು ಹೋಗುತ್ತಾರೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ ಎಂದು ಪ್ರಶ್ನೆ ಕೇಳಿದ್ದಾನೆ. ಇದಕ್ಕೆ ಡಿಸಿಎಂ ನಗುತ್ತಲೇ ಉತ್ತರಿಸಿದರು. ನಿಮ್ಮ ತಾಯಿಗೆ 2000, ಬಸ್ ಉಚಿತ, 10 ಕೆಜಿ ಅಕ್ಕಿ, ಉಚಿತ ವಿದ್ಯುತ್ ನೀಡಲಾಗುತ್ತಿದೆ.
ನೀನು ಕೇಳಿರುವ ಪ್ರಶ್ನೆಗೆ ಸರ್ಕಾರದಲ್ಲಿ ಚರ್ಚಿಸಿ ಒಂದು ವಯೋಮಿತಿಯವರೆಗೆ ಯೋಚಿಸಿ ಮುಂದೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.