AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಲೆಟ್​​ ಏರಿ ಕಾಂಗ್ರೆಸ್ ಜನಾಂದೋಲನಕ್ಕೆ ಬಂದ ಡಿಕೆಶಿ, ಗ್ರ್ಯಾಂಡ್ ಎಂಟ್ರಿ ವಿಡಿಯೋ ಇಲ್ಲಿದೆ

ಬುಲೆಟ್​​ ಏರಿ ಕಾಂಗ್ರೆಸ್ ಜನಾಂದೋಲನಕ್ಕೆ ಬಂದ ಡಿಕೆಶಿ, ಗ್ರ್ಯಾಂಡ್ ಎಂಟ್ರಿ ವಿಡಿಯೋ ಇಲ್ಲಿದೆ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Aug 02, 2024 | 3:52 PM

Share

ಬಿಜೆಪಿ ಮತ್ತು ಜೆಡಿಎಸ್​​ ಪಾದಯಾತ್ರೆಗೆ ಟಕ್ಕರ್​ ನೀಡಲು ಕಾಂಗ್ರೆಸ್​ ಸಹ ಅಲ್ಲಲ್ಲಿ ಜನಾಂದೋಲನ ಸಭೆ ಮಾಡುತ್ತಿದೆ. ಇಂದು ಮೊದಲ ಜನಾಂದೋಲ ಸಭೆ ರಾಮನಗರ ಜಿಲ್ಲೆಯ ಬಿಡಿದಿಯಲ್ಲಿ ನಡೆದಿದ್ದು, ಈ ಸಭೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಲೆಟ್​ನಲ್ಲಿ ಗ್ರ್ಯಾಂಡ್ ಎಂಟ್ರಿ ಕೊಟ್ಟು ಗಮನಸೆಳೆದಿದ್ದಾರೆ.

ರಾಮನಗರ, (ಆಗಸ್ಟ್​ 02): ಮುಡಾ, ವಾಲ್ಮೀಕಿ ಹಗರಣಗಳನ್ನು ಇಟ್ಟುಕೊಂಡು ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಪಾದಯಾತ್ರೆ ಕೈಗೊಂಡಿವೆ. ನಾಳೆಯಿಂದ (ಆಗಸ್ಟ್ 03) ಬೆಂಗಳೂರು ಟು ಮೈಸೂರು ಪಾದಯಾತ್ರೆಗೆ ಚಾಲನೆ ಸಿಗಲಿದೆ. ಈ ವಿಪಕ್ಷಗಳ ಪಾದಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್​​ ಸಹ ಜನಾಂದೋಲ ಕಾರ್ಯಕ್ರಮ ನಡೆಸುತ್ತಿದೆ. ವಿಪಕ್ಷಗಳು ತೆರಳುವ ಮಾರ್ಗದಲ್ಲೇ ಕಾಂಗ್ರೆಸ್​ ಸಭೆ ಮಾಡಲು ತೀರ್ಮಾನಿಸಿದೆ. ನಾಳೆ ಪಾದಯಾತ್ರೆ ಶುರುವಾಗಲಿದ್ದರಿಂದ ಇಂದು (ಆಗಸ್ಟ್​ 02) ರಾಮನಗರದ ಬಿಡದಿಯಲ್ಲಿ ಕಾಂಗ್ರೆಸ್​ ಜನಾಂದೋಲ ಸಭೆ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿ ಬಿಜೆ-ಜೆಡಿಎಸ್​ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಬುಲೆಟ್​ನಲ್ಲಿ ಬಂದು ಗಮನಸೆಳೆದಿದ್ದಾರೆ. ​ ವಂಡರ್ಲಾ ಗೇಟ್ ನಿಂದ ಬಿಡದಿ ತನಕ ಶಾಸಕ ಎಚ್ ಸಿ ಬಾಲಕೃಷ್ಣ ಜೊತೆ ಬುಲೆಟ್​ನಲ್ಲೇ ಕಾರ್ಯಕ್ರಮಕ್ಕೆ ಎಂಟ್ರಿಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More