ಡಿಕೆ ಶಿವಕುಮಾರ್ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್ ಅಶೋಕ್
ವಿಪಕ್ಷ ನಾಯಕ ಆರ್. ಅಶೋಕ್ ಅವರು ಡಿಕೆ ಶಿವಕುಮಾರ್ ಬಿಜೆಪಿಗೆ ಸೇರುವ ಸಾಧ್ಯತೆಯ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಏಕನಾಥ್ ಶಿಂಧೆ ಮಾದರಿಯಲ್ಲಿ ಡಿಕೆ ಶಿವಕುಮಾರ್ ಕೂಡ ಅಧಿಕಾರ ಕಿತ್ತುಕೊಳ್ಳಬಹುದು ಎಂದು ಹೇಳಿದ್ದಾರೆ. ಈ ಹೇಳಿಕೆಯಿಂದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗಳು ಶುರುವಾಗಿವೆ.
ಬೆಂಗಳೂರು, ಫೆಬ್ರವರಿ 27: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೂಡ ಮಹಾರಾಷ್ಟ್ರದ ಏಕನಾಥ ಶಿಂಧೆ ರೀತಿ ಆಗಬಹುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಏಕನಾಥ ಶಿಂಧೆಯಂತಹವರು ತುಂಬಾ ಜನ ಇದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos