ಡಿಕೆ ಶಿವಕುಮಾರ್ಗೆ 64ನೇ ಹುಟ್ಟುಹಬ್ಬದ ಸಂಭ್ರಮ: ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಜನ್ಮದಿನ ಆಚರಿಸಿಕೊಂಡ ಡಿಸಿಎಂ
DK Shivakumar Birthday; ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ 64ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅದ್ಧೂರಿಯಾಗಿ ನಡೆಯಿತು. ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಮಠಾಧೀಶರು ಭೇಟಿ ನೀಡಿ ಶುಭ ಹಾರೈಸಿದರು. ಡಿಕೆಶಿ ನಿವಾಸದ ಮುಂದೆ ಕೇಕ್ ಕಟ್ಟಿಂಗ್ ವಿಡಿಯೋ ಇಲ್ಲಿದೆ.
ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಮೇ 15) ತಮ್ಮ 64ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಸದಾಶಿವನಗರದ ಅವರ ನಿವಾಸದ ಬಳಿ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದೇ ವೇಳೆ ವಿವಿಧ ಮಠಗಳ ಶ್ರೀಗಳು ಹಾಗೂ ಪುರೋಹಿತರು ಡಿಸಿಎಂ ನಿವಾಸಕ್ಕೆ ಭೇಟಿ ನೀಡಿ, ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ ಅವರಿಗೆ ಆಯುಷ್ಯ, ಆರೋಗ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದರು. ಅಭಿಮಾನಿಗಳ ಶುಭಾಶಯ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಸಂಭ್ರಮಾಚರಣೆಯ ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

