ಕಾಲೇಜ್ ಡೇಸ್ನಲ್ಲಿ ಓಡಿಸ್ತಿದ್ದ ಲಕ್ಕಿ ಬೈಕ್ಗೆ ಹೊಸ ರೂಪ: ಡಿಕೆಶಿ ಫುಲ್ ಖುಷ್
ಡಿಕೆ ಶಿವಕುಮಾರ್ ಅವರ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಮೊದಲ ಬೈಕ್ಗೆ ಹೊಸ ಟಚ್ ಕೊಟ್ಟಿದ್ದಾರೆ. ಹೊಸ ರೂಪ ಪಡೆದುಕೊಂಡ ತಮ್ಮ ಲಕ್ಕಿ ಬೈಕ್ ಅನ್ನು ಮತ್ತೆ ಸ್ಟಾರ್ಟ್ ಮಾಡಿ ಕಾಲೇಜು ದಿನಗಳನ್ನು ಮೆಲುಕು ಹಾಕಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 01): ಕಾಲೇಜ್ ಡೇಸ್ ನಲ್ಲಿ ಬೈಕ್ ಕ್ರೇಜ್ ಸಾಮಾನ್ಯ. ಅದರಂತೆ ಡಿಕೆ ಶಿವಕುಮಾರ್ಗೂ ಸಹ ಬೈಕ್ ಕ್ರೇಜ್ ಇದ್ದು, ಕಾಲೇಜು ದಿನಗಳಲ್ಲಿ ಓಡಾಡಿಸುತ್ತಿದ್ದ ಮೊದಲ ಬೈಕ್ಗೆ ಹೊಸ ರೂಪ ನೀಡಿದ್ದಾರೆ. ಹೌದು…ವಿಂಟೇಜ್ ಬೈಕ್ ಪ್ರೇಮಿಯಾದ ಸುಪ್ರಿತ್ ಎನ್ನುವ ಯುವಕ, ಡಿಕೆ ಶಿವಕುಮಾರ್ ಅವರ ಬೈಕ್ ಅನ್ನು ಸಂಪೂರ್ಣವಾಗಿ ಮರು ನವೀಕರಣ ಮಾಡಿ ಇಂದು ಅವರಿಗೆ ಹಸ್ತಾಂತರಿಸಿದರು. ಈ ಬಗ್ಗೆ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ. ನನ್ನ ಕಾಲೇಜು ದಿನಗಳಲ್ಲಿ ಓಡಿಸಿದ ಬೈಕ್ ಕೆಲ ವರ್ಷಗಳಿಂದ ಧೂಳು ಹಿಡಿದಿತ್ತು, ವಿಂಟೇಜ್ ಬೈಕ್ ಪ್ರೇಮಿಯಾದ ಸುಪ್ರಿತ್ ಎನ್ನುವ ಯುವಕ ಸಂಪೂರ್ಣವಾಗಿ ಮರು ನವೀಕರಣ ಮಾಡಿ ಇಂದು ನನಗೆ ಹಸ್ತಾಂತರಿಸಿದರು. ನನ್ನ ಮೊದಲ ಬೈಕ್ ಇದು, ಇದರೊಂದಿಗೆ ಸಾವಿರಾರು ನೆನಪುಗಳು ಬೆಸೆದುಕೊಂಡಿವೆ. ಆ ನೆನಪಿನ ಪುಟಗಳಿಗೆ ಹೋಗಿ ಬಂದ ಅನುಭವವಾಯಿತು ಎಂದು ಹಳೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

