ಕಾಲೇಜ್​ ಡೇಸ್​ನಲ್ಲಿ ಓಡಿಸ್ತಿದ್ದ ಲಕ್ಕಿ ಬೈಕ್​ಗೆ ಹೊಸ ರೂಪ: ಡಿಕೆಶಿ ಫುಲ್ ಖುಷ್

Updated on: Sep 01, 2024 | 4:19 PM

ಡಿಕೆ ಶಿವಕುಮಾರ್ ಅವರ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಮೊದಲ ಬೈಕ್​ಗೆ ಹೊಸ ಟಚ್​ ಕೊಟ್ಟಿದ್ದಾರೆ. ಹೊಸ ರೂಪ ಪಡೆದುಕೊಂಡ ತಮ್ಮ ಲಕ್ಕಿ ಬೈಕ್​ ಅನ್ನು ಮತ್ತೆ ಸ್ಟಾರ್ಟ್​ ಮಾಡಿ ಕಾಲೇಜು ದಿನಗಳನ್ನು ಮೆಲುಕು ಹಾಕಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 01): ಕಾಲೇಜ್ ಡೇಸ್ ನಲ್ಲಿ ಬೈಕ್ ಕ್ರೇಜ್ ಸಾಮಾನ್ಯ. ಅದರಂತೆ ಡಿಕೆ ಶಿವಕುಮಾರ್​​ಗೂ ಸಹ ಬೈಕ್​ ಕ್ರೇಜ್ ಇದ್ದು, ಕಾಲೇಜು ದಿನಗಳಲ್ಲಿ ಓಡಾಡಿಸುತ್ತಿದ್ದ ಮೊದಲ ಬೈಕ್​ಗೆ ಹೊಸ ರೂಪ ನೀಡಿದ್ದಾರೆ. ಹೌದು…ವಿಂಟೇಜ್ ಬೈಕ್ ಪ್ರೇಮಿಯಾದ ಸುಪ್ರಿತ್ ಎನ್ನುವ ಯುವಕ, ಡಿಕೆ ಶಿವಕುಮಾರ್ ಅವರ ಬೈಕ್​​ ಅನ್ನು ಸಂಪೂರ್ಣವಾಗಿ ಮರು ನವೀಕರಣ ಮಾಡಿ ಇಂದು ಅವರಿಗೆ ಹಸ್ತಾಂತರಿಸಿದರು. ಈ ಬಗ್ಗೆ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ. ನನ್ನ ಕಾಲೇಜು ದಿನಗಳಲ್ಲಿ ಓಡಿಸಿದ ಬೈಕ್ ಕೆಲ ವರ್ಷಗಳಿಂದ ಧೂಳು ಹಿಡಿದಿತ್ತು, ವಿಂಟೇಜ್ ಬೈಕ್ ಪ್ರೇಮಿಯಾದ ಸುಪ್ರಿತ್ ಎನ್ನುವ ಯುವಕ ಸಂಪೂರ್ಣವಾಗಿ ಮರು ನವೀಕರಣ ಮಾಡಿ ಇಂದು ನನಗೆ ಹಸ್ತಾಂತರಿಸಿದರು. ನನ್ನ ಮೊದಲ ಬೈಕ್ ಇದು, ಇದರೊಂದಿಗೆ ಸಾವಿರಾರು ನೆನಪುಗಳು ಬೆಸೆದುಕೊಂಡಿವೆ. ಆ ನೆನಪಿನ ಪುಟಗಳಿಗೆ ಹೋಗಿ ಬಂದ ಅನುಭವವಾಯಿತು ಎಂದು ಹಳೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More