ಬೆಂಗಳೂರಿನ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಜೋರಾದ ಬೆನ್ನಲ್ಲೇ ಎಚ್ಚೆತ್ತ ಡಿಕೆಶಿ, ದಿಟ್ಟ ಕ್ರಮ
ಬೆಂಗಳೂರಿನ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ನಗರದಲ್ಲಿ ಎಲ್ಲಿ ನೋಡಿದ್ರೂ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ (Road Potholes). ನಗರದ ಬಡಾವಣೆಯ ರಸ್ತೆಗಳ ಸ್ಥಿತಿಯಂತೂ ಹೇಳ ತೀರದ್ದಾಗಿದೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ದಿನ ನಿತ್ಯ ಸರ್ಕಸ್ ಮಾಡುತ್ತಾ ಸವಾರಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಷಿಯಲ್ ಮೀಡಿಯಾನಲ್ಲಿ ಈ ಬಗ್ಗೆ ಅಭಿಯಾನ ನಡೆಸಿದ್ದಾರೆ. ಇನ್ನು ನಿಮ್ಮ ಟಿವಿ9 ಸಹ ಏನ್ ರೋಡ್ ಗುರು ಎನ್ನುವ ಹೆಸರಿನಲ್ಲಿ ರಸ್ತೆಗಳ ವಾಸ್ತವ ಚಿತ್ರಣವನ್ನು ಜನರ ಮುಂದಿಡುತ್ತಿದೆ. ಮತ್ತೊಂದೆಡೆ ಈ ರಸ್ತೆ ಗುಂಡಿಗಳಿಂದ ಬೇಸತ್ತು ನಗರ ತೊರೆಯಲು ಟೆಕ್ ಕಂಪನಿಗಳು ಯೋಚಿಸುತ್ತಿವೆ. ಹೀಗೆ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಜೋರಾದ ಬೆನ್ನಲ್ಲೇ ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಎಚ್ಚೆತ್ತುಕೊಂಡಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಡೆಡ್ ಲೈನ್ ಕೊಟ್ಟಿದ್ದಾರೆ.
ಬೆಂಗಳೂರು (ಸೆಪ್ಟೆಂಬರ್ 17): ಬೆಂಗಳೂರಿನ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ನಗರದಲ್ಲಿ ಎಲ್ಲಿ ನೋಡಿದ್ರೂ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ (Road Potholes). ನಗರದ ಬಡಾವಣೆಯ ರಸ್ತೆಗಳ ಸ್ಥಿತಿಯಂತೂ ಹೇಳ ತೀರದ್ದಾಗಿದೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ದಿನ ನಿತ್ಯ ಸರ್ಕಸ್ ಮಾಡುತ್ತಾ ಸವಾರಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಷಿಯಲ್ ಮೀಡಿಯಾನಲ್ಲಿ ಈ ಬಗ್ಗೆ ಅಭಿಯಾನ ನಡೆಸಿದ್ದಾರೆ. ಇನ್ನು ನಿಮ್ಮ ಟಿವಿ9 ಸಹ ಏನ್ ರೋಡ್ ಗುರು ಎನ್ನುವ ಹೆಸರಿನಲ್ಲಿ ರಸ್ತೆಗಳ ವಾಸ್ತವ ಚಿತ್ರಣವನ್ನು ಜನರ ಮುಂದಿಡುತ್ತಿದೆ. ಮತ್ತೊಂದೆಡೆ ಈ ರಸ್ತೆ ಗುಂಡಿಗಳಿಂದ ಬೇಸತ್ತು ನಗರ ತೊರೆಯಲು ಟೆಕ್ ಕಂಪನಿಗಳು ಯೋಚಿಸುತ್ತಿವೆ. ಹೀಗೆ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಜೋರಾದ ಬೆನ್ನಲ್ಲೇ ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಎಚ್ಚೆತ್ತುಕೊಂಡಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಡೆಡ್ ಲೈನ್ ಕೊಟ್ಟಿದ್ದಾರೆ.
ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ. ನವೆಂಬರ್ ತಿಂಗಳೊಳಗೆ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿದೆ. ಆದಷ್ಟು ಬೇಗ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
694 ಕೋಟಿ ರೂಪಾಯಿ ವೆಚ್ಚದಲ್ಲಿ 349 ಕಿಲೋ ಮೀಟರ್ ಉದ್ದದ 182 ರಸ್ತೆಗಳ ಬ್ಲ್ಯಾಕ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆಗಳಲ್ಲಿ ನೀರು ನಿಲ್ಲದಂತೆ, ಗುಂಡಿಗಳು ಇಲ್ಲದಂತೆ ಡಾಂಬರೀಕರಣ ಮಾಡಲು ನವೆಂಬರ್ ಗಡುವು ನೀಡಲಾಗಿದೆ. 401 ಕಿ.ಮೀ. ಉದ್ದದ 178 ರಸ್ತೆಗಳು ದೋಷಮುಕ್ತವಿದೆ. ಅಲ್ಲಲ್ಲಿ ಬಿದ್ದಿರುವ ಗುಂಡಿಗಳು ಮತ್ತು ಮೇಲ್ಮೈ ಪದರ ಹಾಳಾಗಿದ್ದರೆ ಗುತ್ತಿಗೆದಾರರೇ ದುರಸ್ತಿಪಡಿಸಬೇಕು. ನವೆಂಬರ್ ಒಳಗೆ ರಸ್ತೆ ದುರಸ್ತಿ, ಗುಂಡಿ ಕಾಮಗಾರಿ ಮುಗಿಸಲು ಸೂಚಿಸಿದ್ದಾರೆ.

