ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಇಂದು (ಮೇ 14) ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಈ ವೇಳೆ ಗ್ರೇಟರ್ ಬೆಂಗಳೂರು, ಈ-ಖಾತಾ, ಸುರಂಗ ಮಾರ್ಗ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ
ಬೆಂಗಳೂರು, (ಮೇ 24): ಬೆಂಗಳೂರಿನ 2 ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮೊದಲ ಹಂತಕ್ಕೆ ಶೀಘ್ರವೇ ಟೆಂಡರ್ ಕರೆಯಲಾಗುವುದು. ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು. ಈ ಉದ್ದೇಶದಿಂದ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು. ವಿಧಾನಸೌಧದ 1 ಕಿ.ಮೀ. ಸುತ್ತಮುತ್ತ ನಿರ್ಗಮನಕ್ಕೆ ಅವಕಾಶ ಇಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಇದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಇಂದು (ಮೇ 14) ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ. ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದು ತಿಳಿಸಿದರು.

ಡಿವೈಡರ್ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್

‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
