ಚನ್ನಪಟ್ಟಣ ಬೈ ಎಲೆಕ್ಷನ್ ಅಖಾಡಕ್ಕೆ ಧುಮುಕಿದ ಡಿಕೆ ಶಿವಕುಮಾರ್‌; ಸ್ಫೋಟಕ ಸುಳಿವು ಕೊಟ್ಟ ಡಿಸಿಎಂ

| Updated By: ರಮೇಶ್ ಬಿ. ಜವಳಗೇರಾ

Updated on: Jun 19, 2024 | 5:14 PM

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ ಬಳಿಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಅಖಾಡಕ್ಕೆ ಸಜ್ಜಾಗಿದೆ. ಇದೀಗ ಖುದ್ದು ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡಕ್ಕೆ ಧುಮುಕಿದ್ದಾರೆ,

ರಾಮನಗರ, (ಜೂನ್ 19) : ಲೋಕಸಭಾ ಚುನಾವಣೆಯ ಅಬ್ಬರ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮತ್ತೊಂದು ರೋಚಕ ರಾಜಕೀಯ ಶುರುವಾಗಿದೆ. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ ಬಳಿಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಅಖಾಡಕ್ಕೆ ಸಜ್ಜಾಗಿದೆ. ಖುದ್ದು ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಇಂದು ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದು, ಈ ಕ್ಷೇತ್ರದ ಜನರ ಋಣ ತೀರಿಸಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಇರುವ ಕೆಂಗಲ್ ಗ್ರಾಮದಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಕ್ಷೇತ್ರದ ಜನರ ಋಣ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಹೊಸ ರಾಜಕೀಯ ಜೀವನ ಪ್ರಾರಂಭ ಮಾಡಲು ಹೋಗ್ತಿದ್ದೇನೆ. ಚನ್ನಪಟ್ಟಣ ಪ್ರಾರಂಭ ಮಾಡಿದಾಗ ಈ ಭಾಗವನ್ನು ಪ್ರತಿನಿಧಿಸ್ತಿದ್ದೆ. ಮರು ವಿಂಗಡಣೆ ಸಂದರ್ಭದಲ್ಲಿ ಬಿಟ್ಟು ಹೋಗಬೇಕಾದ ನೋವಿತ್ತು. ನನ್ನನ್ನು ಚನ್ನಪಟ್ಟಣ ಜನತೆ ಪ್ರೀತಿಯಿಂದ ಕಾಣುತ್ತಿದ್ದಾರೆ. ಎಂದು ಹೇಳಿದರು. ಈ ಮೂಲಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on