DCM DK Shivakumar Press Conference Live; ಕೇವಲ ‘ಬ್ರ್ಯಾಂಡ್ ಬೆಂಗಳೂರು‘ ಸಂಬಂಧಿಸಿದ ಪ್ರಶ್ನೆ ಮಾತ್ರ ಕೇಳಿ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 21, 2023 | 2:58 PM

ಬ್ರ್ಯಾಂಡ್ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಟಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬ್ರ್ಯಾಂಡ್ ಬೆಂಗಳೂರು (Brand Bengaluru) ಸಂಬಂಧಿಸಿದಂತೆ ವಿಕಾಸ ಸೌಧದಲ್ಲಿ ಒಂದು ಅತ್ಯಂತ ಮಹತ್ವದ ಸುದ್ದಿಗೋಷ್ಟಿಯನ್ನು ನಡೆಸುತ್ತಿದ್ದಾರೆ. ಗೋಷ್ಟಿ ಆರಂಭಗೊಂಡ ಬಳಿಕ ಪತ್ರಕರ್ತರು ಅನ್ನಭಾಗ್ಯ (Anna Bhagya), ಮತ್ತು ಇತರ ಗ್ಯಾರಂಟಿಗಳ ಬಗ್ಗೆ ಪ್ರಶ್ನೆ ಕೇಳಿದಾಗ ಅವರು ಕೇವಲ ಬ್ರ್ಯಾಂಡ್ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಮಾತ್ರ ಕೇಳಿ ಎಂದು ತಾಕೀತು ಮಾಡಿದರು. ಸುದ್ದಿಗೋಷ್ಟಿಯ ನೇರ ಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.