ಬೆಂಗಳೂರಿನ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಹೇಗಿದೆ ನೋಡಿ

Updated on: May 01, 2026 | 8:23 PM

ಬೆಂಗಳೂರಿನಲ್ಲಿಂದು ಆರ್‌.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ (Bengaluru's double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಚಾಲನೆ ನೀಡಿದರು. ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್‌ ಅನುಕೂಲವಾಗಲಿದೆ.

ಬೆಂಗಳೂರು, (ಮೇ 01): ಬೆಂಗಳೂರಿನಲ್ಲಿಂದು ಆರ್‌.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ (Bengaluru’s double-decker flyover) ವಾಹನ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಚಾಲನೆ ನೀಡಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಹಾಗೂ ಬೆಂಗಳೂರು ದಕ್ಷಿಣ ಭಾಗದ ಪ್ರಮುಖ ಪ್ರದೇಶಗಳಿಗೆ ಓಡಾಡಲು ಈ ಫ್ಲೈಓವರ್‌ ಅನುಕೂಲವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸೈವಾಕ್ ನಿರ್ಮಾಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗಲಿ ಎಂದು ಈ ಸ್ಕೈವಾಕ್‌ ನಿರ್ಮಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 01, 2026 08:22 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More