ಚನ್ನಪಟ್ಟಣ ಬದಲಾವಣೆಗೆ ಪಣತೊಟ್ಟಿದ್ದೇವೆ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಡಿಕೆ ಶಿವಕುಮಾರ್ ಹೇಳಿಕೆ
ನಮ್ಮ ಇಡೀ ಸರ್ಕಾರ ಚನ್ನಪಟ್ಟಣದಲ್ಲಿ ಬದಲಾವಣೆ ತರಲು ಸಿದ್ಧವಾಗಿದೆ. ಕೇವಲ ರಾಜಕೀಯಕ್ಕಾಗಿ ಅಲ್ಲ, ಇಲ್ಲಿ ಬದಲಾವಣೆ ಮಾಡಬೇಕು ಎಂಬುದು ನಮ್ಮ ನಿರೀಕ್ಷೆಯಾಗಿತ್ತು. ಅದನ್ನು ಮಾಡಲು ಹೊರಟಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಿಂದೆ ಮಾಡಲು ಆಗಿರಲಿಲ್ಲ, ಈಗ ನಮಗೆ ಅವಕಾಶ ಸಿಕ್ಕಿದೆ. ಈಗ ಜನಸೇವೆ ಮಾಡಲು ಹೊರಟಿದ್ದೇವೆ ಎಂದರು.
ರಾಮನಗರ, ಸೆಪ್ಟೆಂಬರ್ 21: ಚನ್ನಪಟ್ಟಣದಲ್ಲಿ ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಚನ್ನಪಟ್ಟಣದ ತಟ್ಟಕೆರೆಯ 12 ಎಕರೆ ಜಾಗದಲ್ಲಿ 9 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ತಟ್ಟಕೆರೆ ಬಡಾವಣೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಸಮೀಪದಲ್ಲಿ ಇದೆ. ಒಂದು ವರ್ಷ ಅವಧಿಯೊಳಗೆ ಕ್ರೀಡಾಂಗಣ ಪೂರ್ಣವಾಗಲಿದ್ದು, ಕ್ರೀಡಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ನಿರ್ಮಾಣ ಕಾರ್ಯ ಕೈಗೊಂಡಿವೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಗೆಲ್ಲಿಸಿ ಕುಮಾರಸ್ವಾಮಿ ಹಿಡಿತದಿಂದ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವ ಇರಾದೆಯಲ್ಲಿ ಅವರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ